ರಾಜ್ಯದ ಅತಿ ದೊಡ್ಡ ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡಿದೆ. ಶರಾವತಿ ನದಿಗೆ ಬಾಗಿನ ಅರ್ಪಿಸುವ ಮೂಲಕ ಸಿಗಂದೂರು ಸೇತುವೆಯನ್ನ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ ಜೋಶಿ ಸಂಸದ ಬಿ ವೈ ರಾಘವೇಂದ್ರ ಅವರು ನೂತನ ಸೇತುವೆಯನ್ನು ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಮೊದಲು ಉದ್ಘಾಟನಾ ಕಲ್ಲುಗಳನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು.ನಂತರ ಗಣಪತಿ ಹೋಮ ಹಾಗೂ ದೇವಿ ಪೂಜೆ ಪೂಜೆಯಲ್ಲಿ ತೊಡಗಿ ಆರತಿ ಬೆಳಗಿದರು. ನಂತರ ಶರಾವತಿ ಹಿನ್ನೆರಿಗೆ ಬಾಗಿನ ಅರ್ಪಿಸುವ ಮೂಲಕ ಸೇತುವೆ ಉದ್ಘಾಟನೆಯನ್ನು ಅಧಿಕೃತಗೊಳಿಸಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶರಾವತಿ ಹಿನ್ನೆರಿಗೆ ಬಾಗಿನ ಅರ್ಪಿಸಿ ಉದ್ಘಾಟನಾ ಕಾರ್ಯಕ್ರಮಕ್ಕೆ ಉಪಸ್ಥಿದ್ದರು.ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಸಂಸದರು ಎಂಎಲ್ ಸಿ ಡಾ.ಧನಂಜಯ್ ಸರ್ಜಿ ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಾಸಕ  ಗೋಪಾಲಕೃಷ್ಣ ಮತ್ತು ಇತರ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮಕ್ಕೆ ಗೈರ್ ಆದರೂ.