ಕಳೆದ ವಾರ ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ ನೌಕರರು ಅನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದರು.
ಈ ಸಂದರ್ಭದಲ್ಲಿ ಮುಷ್ಕರವನ್ನು ಹಿಂಪಡೆಯಲು ಸನ್ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರಿಗೆ ಸೂಚಿಸಿ ಅವರ ಬೇಡಿಕೆಗಳನ್ನು ಇಡೇರಿಸುವ ಭರವಸೆ ನೀಡಿದ ಮೇರೆಗೆ ಬೆಂಗಳೂರು ಮಹಾನಗರ ಪಾಲಿಕೆಯ ನೌಕರರು ಮುಷ್ಕರ ವಾಪಸ್ ಪಡೆಯಲಾಗಿತ್ತು.
ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್ ರವರ ಅಧ್ಯಕ್ಷತೆಯಲ್ಲಿ ಇ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರು ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಶ್ರೀ ಅಮೃತ್ ರಾಜ್ ರವರ ನಿಯೋಗವು ಸಭೆ ನಡೆಸಿದರು.
ಸಭೆಯಲ್ಲಿ ಸಚಿವರು ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಮಹಾನಗರ ಪಾಲಿಕೆಯ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರ ನಿಯೋಗ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ಶ್ರೀ ಅಮೃತ್ ರಾಜ್ ರವರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರಿಗೆ ಸನ್ಮಾನಿಸಿ ಅಭಿನಂದಿಸಿದರು
ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಸಂಗಾ ರವರು ಉಪಸ್ಥಿತರಿದ್ದರು.