ಶ್ರೀ ಕೃಷ್ಣ ಮೂರ್ತಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆ ರವರು ಶೀವಮೊಗ್ಗ ನಗರದ ಸಹ್ಯಾದ್ರಿ ವಾಣಿಜ್ಯ ಕಾಲೇಜುನಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೈಬರ್ ಕ್ರೈಮ್ ಜಾಗೃತಿ, ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮುಂದೆ ಜೀವನದಲ್ಲಿ ಆಗುವ ಅನಾಹುತಗಳನ್ನು ಅರಿವಾಗುವಂತೆ ನೀತಿ ಪಾಠ ಹೇಳಿದರು.ಹಾಗೂ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿರುತ್ತಾರೆ.
ಈ ಸಂದರ್ಭದಲ್ಲಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.