ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜು.21 ರ ಮಧ್ಯಾಹ್ನ 2 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರೈಕೆ : ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ ಕಾರ್ಯಕ್ರಮ ಉದ್ಘಾಟನೆ ಹಾಗೂ ಗೃಹ ಆರೋಗ್ಯ ಯೋಜನೆ ಕುರಿತು ಕಾರ್ಯಾಗಾರ ಮತ್ತು ಆಶಾ ಕೈಪಿಡಿ ಬಿಡುಗಡೆ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು, ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್, ಸಾಗರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು, ಸಂಸದರಾದ ಬಿ.ವೈ.ರಾಘವೇಂದ್ರ ಅವರು ಆಗಮಿಸುವರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನಸಭಾ, ವಿಧಾನ ಪರಿಷತ್ ಶಾಸಕರುಗಳು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳುವರು.