ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಗಿನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ಆಯೋಜಿಸಲಾಗಿದ್ದ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಒಟ್ಟು 44 ಕುಟುಂಬಗಳಿಗೆ ತಾಡಪಾಲು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ಮಳೆಗಾಲದ ಸವಾಲುಗಳನ್ನು ಎದುರಿಸುತ್ತಿರುವ ಹಕ್ಕಿಪಿಕ್ಕಿ ಹಾಗೂ ಅಲೆಮಾರಿ ಸಮುದಾಯದವರಿಗೆ ಹೆಚ್ಚಿನ ಮೂಲಸೌಕರ್ಯಗಳನ್ನು ಕಲ್ಪಿಸುವ ಹಾಗೂ ಶಾಶ್ವತ ನೆಲೆ ಕಂಡುಕೊಳ್ಳುವ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಪಲ್ಲವಿ ರವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಸ್ತಾವಿಸಿದರು.

ಕಾರ್ಯಕ್ರಮದ ವೇಳೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಶ್ರೀಮತಿ ಪಲ್ಲವಿ ಜಿ. , ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯ ಪ್ರಮುಖರು ಹಾಜರಿದ್ದರು.