ತುಂಗಾನಗರ ಪೊಲೀಸ್ ಠಾಣೆಯಲ್ಲಿ, ಆರೋಗ್ಯ ತಪಾಸಣಾ ಶಿಭಿರವನ್ನು ಹಮ್ಮಿಕೊಂಡಿದ್ದು, ಸುಬ್ಬಯ್ಯ ಮೆಡಿಕಲ್ ಕಾಲೇಜ್ ನ ವೈಧ್ಯಾಧಿಕಾರಿಗಳು ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳ ಆರೋಗ್ಯ ತಪಾಸಣೆ ನಡೆಸಿರುತ್ತಾರೆ.
ಈ ಸಂದರ್ಭದಲ್ಲಿ ಮಾತನಾಡಿದ PI ಗುರುರಾಜ್ ರವರು ಮನುಷ್ಯನಿಗೆ ಆರೋಗ್ಯ ತುಂಬಾ ಮುಖ್ಯ. ವಿಶೇಷವಾಗಿ ಮಕ್ಕಳ ಆರೋಗ್ಯ ಕಾಪಾಡಬೇಕಾಗಿರೋದು ತಂದೆ ತಾಯಿ ಕರ್ತವ್ಯ.ಪ್ರತಿನಿತ್ಯ ಯೋಗ ಮತ್ತು ವಾಕಿಂಗ್ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದರು.
ಈ ಸಂದರ್ಭದಲ್ಲಿ ತುಂಗಾನಗರ ಠಾಣೆಯ asi ಮತ್ತು ಪೊಲೀಸ್ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.