ಸರ್ಕಾರಿ ವಸತಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ ನಗರ ಶಾಸಕ ಚನ್ನಬಸಪ್ಪ ಭೇಟಿ ನೀಡಿದರು.ದೂರದ ಊರಿನಿಂದ ವ್ಯಾಸಂಗಕ್ಕಾಗಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರಿಗೆ ಎದುರಾಗುತ್ತಿರುವ ವಸತಿ ಹಾಗೂ ಆಹಾರ ವ್ಯವಸ್ಥೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಾಸಕಕರು ಸಭೆ ನಡೆಸಿ, ಹಲವಾರು ವಿಷಯಗಳನ್ನು ಚರ್ಚಿಸಿದರು.
ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು:
- ಹಲವಾರು ವಿದ್ಯಾರ್ಥಿನಿಯರು ಹತ್ತಾರು ಕಿಲೋಮೀಟರ್ ದೂರದಿಂದ ವಿದ್ಯಾಭ್ಯಾಸಕ್ಕಾಗಿ ಆಗಮಿಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ವ್ಯವಸ್ಥೆಯನ್ನು ವಿಸ್ತರಿಸಿ, ದೈನಂದಿನ ವಸತಿ ಹಾಗೂ ಆಹಾರ ವ್ಯವಸ್ಥೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
- ವಿದ್ಯಾರ್ಥಿನಿಯರಲ್ಲಿ ಬಹುಪಾಲು ಆರ್ಥಿಕವಾಗಿ ಹಿಂದುಳಿದ ಹಿನ್ನಲೆಯಲ್ಲಿ, ಹಾಸ್ಟೆಲ್ ಅರ್ಹತಾ ಮಾನದಂಡಗಳನ್ನು ಮರುಪರಿಶೀಲಿಸಿ, ಅಗತ್ಯವಿರುವ ವಿದ್ಯಾರ್ಥಿನಿಯರಿಗೆ ತ್ವರಿತವಾಗಿ ಸೌಲಭ್ಯ ಒದಗಿಸಬೇಕು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಪೋಷಕರ ಮಕ್ಕಳಿಗೆ ಆಧಿಕ್ಯ ನೀಡಬೇಕೆಂದು ತಿಳಿಸಿದರು.
- ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಯಾವುದೇ ಕಾರಣಕ್ಕೂ ವ್ಯತ್ಯಯ ಉಂಟಾಗದಂತೆ ಬಿಸಿಎಂ ಇಲಾಖೆ ತಕ್ಷಣ ಸ್ಪಂದಿಸಿ ವ್ಯವಸ್ಥೆಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಸೂಚಿಸಿದರು.
ಈ ಸಂದರ್ಭದಲ್ಲಿ ಬಿಸಿಎಂ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಶ್ರೀಮತಿ ಶೋಭಾ, ಬಿಸಿಎಂ ತಾಲೂಕು ಮಟ್ಟದ ಅಧಿಕಾರಿಗಳಾದ ಶ್ರೀ ಪವಿತ್ರಾನಂದರಾಜು, ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ರವಿ ನಾಯಕ್ ಡಿ ಸೇರಿದಂತೆ ಕಾಲೇಜಿನ ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.