“ಮಾಸ್ತಿ ಕನ್ನಡದ ಆಸ್ತಿ”
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭೇಟಿ ನೀಡಿದರು.ಆಧುನಿಕ ಕನ್ನಡ ಸಣ್ಣಕತೆಗಳ ಜನಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ “ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್” ಅವರ ಪುತ್ಥಳಿಗೆ ಮಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದವರು ಮಾಲೂರಿನ ಕರ್ನಾಟಕ ಪಬ್ಲಿಕ್ ಶಾಲೆಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ತಮ್ಮ ಸಂಬಳದ 5ಲಕ್ಷ ರೂ ಗಳನ್ನು ಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡುವುದಾಗಿ ಘೋಷಿಸಿದರು. ಮುಂದಿನ ದಿನಗಳಲ್ಲಿ ಶಾಲೆಯು ರಾಜ್ಯದಲ್ಲಿ ಅತ್ಯುತ್ತಮ ಹೆಸರನ್ನು ಮಾಡಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಕೆ.ವೈ ನಂಜೇಗೌಡ್ರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಅನಿಲ್ ಕುಮಾರ್, ಶ್ರೀ ಇಂಚರ ಗೋವಿಂದರಾಜು, OSSAT ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಜನಾರ್ಧನ್ ಟಕ್ಕರ್ ಹಾಗೂ ಶ್ರೀಮತಿ ಲಿಂಡಾ ಜನಾರ್ಧನ್ ಟಕ್ಕರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.