ಪ್ರತಿ ಜಿಲ್ಲೆಗಳಲ್ಲಿ ಸರಾಸರಿ 400ರಂತೆ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳನ್ನೊಳಗೊಂಡು ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡುತ್ತಿರುವ 12000+ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ನಗದು ಪುರಸ್ಕಾರ, ಸ್ಮರಣಿಕೆ ನೀಡಿ ಗೌರವಿಸುವ ಮೂಲಕ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರುವಂತೆ ಪ್ರೋತ್ಸಾಹಿಸುವ ಕಾರ್ಯಕ್ರಮ ಕಳೆದ 5-6 ವರ್ಷಗಳಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು.
ಅವರು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ 18ಜಿಲ್ಲೆಗಳಲ್ಲಿ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವನ್ನು ಆಗಸ್ಟ್‌ರಂದು ಸಂಜೆ 4ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ 1200ಕ್ಕೂ ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು, ಅವರು ಪೋಷಕರು, ನೌಕರ ಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ ಎಂದವರು ನುಡಿದರು.
ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಉದ್ಘಾಟಿಸುವರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ ಮತ್ತು ಶ್ರೀಮತಿ ಶಾರದಾ ಪೂರ್ಯಾನಾಯ್ಕ್‌ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉಳಿದಂತೆ ಜಿಲ್ಲೆಯ ವಿಧಾನಪರಿಷತ್‌ಮತ್ತು ವಿಧಾನ ಸಭಾ ಕ್ಷೇತ್ರಗಳ ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು-ಉಪಾಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು, ನೌಕರರ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು.
ಈ ಕಾರ್ಯಕ್ರಮದಲ್ಲಿ ಪ್ರೇರಣಾ ನುಡಿಗಳನ್ನಾಡಲು ಟಿವಿ-9 ವಿದ್ಯುನ್ಮಾನ ವಾಹಿನಿಯ ಪ್ರಧಾನ ನಿರ್ಮಾಪಕ ಮತ್ತು ಹಿರಿಯ ನಿರೂಪಕ ರಂಗನಾಥ್‌ಭಾರದ್ವಾಜ್‌ಅವರು ಆಗಮಿಸಲಿರುವರು. ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಉಪಸ್ಥಿತರಿರುವರು.
ಈ ಕಾರ್ಯಕ್ರಮಕ್ಕೆ ಪೋಷಕರು ತಮ್ಮ ಪ್ರತಿಭಾವಂತ ಮಕ್ಕಳೊಂದಿಗೆ ಸಕಾಲಕ್ಕೆ ಆಗಮಿಸಿ, ನಿಗಧಿಪಡಿಸಿದ ಕೌಂಟರಿನಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಹಾಗೂ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರು ಮತ್ತು ಅವರು ಕುಟುಂಬದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅವರು ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್, ಗೌರವಾಧ್ಯಕ್ಷ ನರಸಿಂಹಮೂರ್ತಿ, ಕಾರ್ಯದರ್ಶಿ ಆರ್.ಪಾಪಣ್ಣ, ಸತೀಶ್, ಆರ್.ಮಾರುತಿ, ಕೊಟ್ರೇಶ್, ಲಕ್ಷ್ಮಣ್, ಅಶೋಕ್‌ಮತ್ತಿತರರು ಉಪಸ್ಥಿತರಿದ್ದರು.