ಶಿವಮೊಗ್ಗ ನಗರದ ಸಾರ್ವಜನಿಕರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿ ಎಂದು ಶಾಸಕ ಚನ್ನಬಸಪ್ಪ ಹೇಳಿದರು.ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ  ಶಾಸಕರು ಮತ್ತು ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಅವರೊಂದಿಗೆ ಮಹತ್ವಪೂರ್ಣ ಸಭೆ ನಡೆಸಿ ಸಾರ್ವಜನಿಕರ ಬಳಿಗೆ ಉತ್ತಮ ಆಡಳಿತ ಹಾಗೂ ಸುಗಮ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.

  1. ಕಂದಾಯ ವಿಭಾಗದ ಕುರಿತು:
  • ಸಾರ್ವಜನಿಕರು ಈ ಸ್ವತ್ತು ದಾಖಲೆಗಳ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ, ಅದಕ್ಕೆ ಶೀಘ್ರ ಪರಿಹಾರ ನೀಡುವಂತೆ ಆದೇಶಿಸಿದರು.
  • ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ, ಅಧಿಕಾರಿಗಳು ನಿಗದಿತ ಕಾಲಾವಧಿಯೊಳಗೆ ಕೆಲಸ ಮುಗಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
  • ಕಚೇರಿ ಮಟ್ಟದಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಅಲೆದಾಟ ನಿವಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
  • ಮನೆ ಬಾಗಿಲಿಗೆ ತೆರಿಗೆ ಸೌಲಭ್ಯ (Doorstep Revenue Services) ಒದಗಿಸುವ ಕುರಿತಂತೆ ಸಮಾಲೋಚನೆ ನಡೆಸಿದರು
  • “ಬಿ ಖಾತ” ನಿರ್ವಹಣೆಯಲ್ಲಿ ಕಂಡುಬರುತ್ತಿರುವ ಅಡಚಣೆಗಳ ಬಗ್ಗೆ ಚರ್ಚಿಸಿ, ಸಾರ್ವಜನಿಕರಿಗೆ ಸುಲಭವಾಗಿ ಸೇವೆ ಒದಗಿಸುವಂತೆ ಸೂಚಿಸಿದರು.
  • ಕಂದಾಯ ಇಲಾಖೆಯ ಕೆಲವೊಂದು ಅಧಿಕಾರಿಗಳ ಕಾರ್ಯ ವೈಖರಿಯ ಬಗ್ಗೆ ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಚರ್ಚಿಸಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಖಡಕ್ ಸೂಚನೆ ನೀಡಿದರು.
  1. ಎಂಜಿನಿಯರಿಂಗ್ ವಿಭಾಗ:
  • ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ನೀಡಲಾಗುವ ಅನುದಾನದ ವಿವರಗಳನ್ನು ಪಡೆದು ಅವುಗಳ ಸಮರ್ಪಕ ಬಳಕೆಯ ಕುರಿತು ಚರ್ಚಿಸಿದರು.
  • ನಗರಾದ್ಯಂತ ಇರುವ ಹೊಂಡಗುಂಡಿಗಳು ವಾಹನಸಾರಿಗೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ, ಅವುಗಳನ್ನು ತಕ್ಷಣ ಸರಿಪಡಿಸಲು ಸೂಚಿಸಿದರು.
  • ಪಾಲಿಕೆ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ವಿಮರ್ಶಿಸಿ, ಗುಣಮಟ್ಟ ಮತ್ತು ಸಮಯಪಾಲನೆ ಬಗ್ಗೆ ಗಮನಹರಿಸಿದರು
  • ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗದಂತೆ ನಾಳೆ, ಒಳಚರಂಡಿ ವ್ಯವಸ್ಥೆ ಮತ್ತು ಮಳೆನೀರಿನ ನಿರ್ವಹಣೆ ಬಗ್ಗೆ ತಕ್ಷಣದ ಕ್ರಮ ಕೈಗೊಳ್ಳಲು ಆದೇಶಿಸಿದರು.
  1. ಎಲೆಕ್ಟ್ರಿಕಲ್ ವಿಭಾಗ:
  • ಬೀದಿ ದೀಪ ನಿರ್ವಹಣೆಯಲ್ಲಿ ಖಾಸಗಿ ಗುತ್ತಿಗೆದಾರರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಚರ್ಚಿಸಿದರು.
  • ಗುತ್ತಿಗೆದಾರರ ನಿರ್ಲಕ್ಷ್ಯ ಧೋರಣೆಗೆ ಖಡಕ್ ಎಚ್ಚರಿಕೆ ನೀಡಿ, ಸೇವೆಗಳಲ್ಲಿ ವಿಳಂಬ ಮಾಡದಂತೆ ಸೂಚಿಸಲಾಯಿತು.
  • ಸಾರ್ವಜನಿಕ ಸೇವೆಯಲ್ಲಿ ವೈಫಲ್ಯ ಕಂಡುಬರುವ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಸ್ಪಷ್ಟಪಡಿಸಿದರು.

ಯುಜಿಡಿ ಹಾಗೂ ಆರೋಗ್ಯ ವಿಭಾಗ:

  • ತುಂಗಾ ನದಿಗೆ ಸೇರುತ್ತಿರುವ ಡ್ರೈನೇಜ್ ನೀರಿನ ಸಮಸ್ಯೆ ಕುರಿತಂತೆ ಸಮಗ್ರ ಚರ್ಚೆ ನಡೆಸಿ, ಪರಿಸರದ ಮೇಲೆ ಬರುವ ದುಷ್ಪರಿಣಾಮವನ್ನು ತಡೆಗಟ್ಟಲು ತ್ವರಿತ ಕ್ರಮ ಕೈಗೊಳ್ಳಲು ಸೂಚಿಸಿದರು.
  • ನ್ಯಾಷನಲ್ ಗ್ರೀನ್ ಟ್ರಿಬ್ಯೂನಲ್ (NGT) ವ್ಯಾಪ್ತಿಯ ಅನೇಕ ಯೋಜನೆಗಳು ಅಪೂರ್ಣವಾಗಿರುವುದನ್ನು ಗಮನಿಸಿ, ಅವುಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • ಶಿವಮೊಗ್ಗ ನಗರವನ್ನು ಇನ್ನಷ್ಟು ಸ್ವಚ್ಛ ಹಾಗೂ ನಾವೀನ್ಯತೆಯೊಂದಿಗೆ ಅಭಿವೃದ್ಧಿಪಡಿಸಲು, ಅಗತ್ಯ ಬದಲಾವಣೆ ಹಾಗೂ ಕ್ರಮಗಳ ಬಗ್ಗೆ ಚರ್ಚೆ ನಡೆಸಿ, ಕಾರ್ಯರೂಪಕ್ಕೆ ತರಲು ಆದೇಶಿಸಿದರು.

ಜಲಮಂಡಳಿ ವಿಭಾಗ:

  • 24/7 ಕುಡಿಯುವ ನೀರಿನ ಯೋಜನೆ ಇನ್ನೂ ಸಂಪೂರ್ಣವಾಗಿ ಜಾರಿಗೆ ಬರದಿರುವುದರ ಬಗ್ಗೆ ಮಾಹಿತಿ ಪಡೆದು, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
  • ಯೋಜನೆ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರಿಗೆ ಯಾವುದೇ ನೀರಿನ ಬಿಲ್ ವಿಧಿಸದಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
  • ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ನಿರ್ಮಿಸುತ್ತಿರುವ ನೂತನ ಲ್ಯಾಬ್ ವಿಳಂಬವಾಗಿರುವುದನ್ನು ಗಮನಿಸಿ, ತಕ್ಷಣದಲ್ಲಿ ಕಾರ್ಯಾರಂಭ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.