ಶಿವಮೊಗ್ಗ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಪರೇಡ್ ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಗೌರವ ವಂದನೆಗಳನ್ನು ಸ್ವೀಕರಿಸಿ ಪರೇಡ್ ವೀಕ್ಷಿಸಿದರು.

ನಂತರ ತನಿಖೆಯಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ, ದಿನಾಂಕ: 16-06-2025 ರಿಂದ 30-07-2025 ರ ವರೆಗೆ 45 ದಿನಗಳಲ್ಲಿ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿ, ಒಟ್ಟು 1944 ಪ್ರಕರಣಗಳನ್ನು ವಿಲೇವಾರಿ ಮಾಡಿ ಉತ್ತಮ ಕರ್ತವ್ಯ ನಿರ್ವಹಿಸಿದ ಒಟ್ಟು 79 ಜನ ತನಿಖಾ ಸಹಾಯಕ ಸಿಬ್ಬಂಧಿಗಳಿಗೆ ಮತ್ತು 2024-25ನೇ ಸಾಲಿನ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ಕಬ್ಬಡಿ ಪಂದ್ಯದಲ್ಲಿ ವಲಯ ತಂಡದ ಜೊತೆ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಸದರಿ 04 ಜನ ಪೊಲೀಸ್ ಸಿಬ್ಬಂಧಿಗಳು ಸೇರಿ ಒಟ್ಟು 83 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಹಾಗೂ ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2 ಶಿವಮೊಗ್ಗ ಜಿಲ್ಲೆ ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಶಿವಮೊಗ್ಗ ನಗರದ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.