ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ 31ರಂದು ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಸುವವರ ವಿರುದ್ದ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.
ಒಟ್ಟು 43 ಪ್ರಕರಣಗಳನ್ನು ದಾಖಲಿಸಿ ರೂ. 3750 ದಂಡವನ್ನು ಸಂಗ್ರಹಿಸಲಾಯಿತು.

ಹಾಗೂ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆಯ ಕುರಿತು ತಂಬಾಕು ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.
ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್ , ಸಮಾಜ ಕಾರ್ಯಕರ್ತರಾದ ರವಿರಾಜ್ , ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಕರಾದ ವಿಕಾಸ್ ಮತ್ತು ಪೊಲೀಸ್ ಇಲಾಖೆ ಹಾಗು ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಭಾಗವಹಿಸಿದ್ದರು.