ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಚಿಕ್ಕ ವಯಸ್ಸಿನಿಂದೆಲೇ ಹೆಚ್ಚು ಗಮನ ಹರಿಸಬೇಕು. ಅದರಲ್ಲೂ ಬಾಯಿ ಮತ್ತು ಹಲ್ಲಿನ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ನೀಡಬೇಕು ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿಗಳಾದ ಸತ್ಯನಾರಾಯಣ ತಿಳಿಸಿದರು.
ನಗರದ ಭಾರತೀಯ ದಂತ ವೈದ್ಯ ಸಂಘದಿAದ ಕೆ.ಆರ್.ಪುರಂನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣೆ ಹಾಗೂ ದಂತ ಆರೋಗ್ಯದ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ಶಿವಮೊಗ್ಗ ತಹಸೀಲ್ದಾರ್ ರಾಜೀವ್ ಮಾತನಾಡಿ, ದಂತ ಆರೋಗ್ಯ ಶಿಬಿರದ ಪ್ರಯೋಜನವು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ದೊರೆಯುವಂತೆ ಆಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಿವಮೊಗ್ಗ ತಾಲ್ಲೂಕಿನ ಆಯ್ದ 25 ಶಾಲೆಗಳ ವಿದ್ಯಾರ್ಥಿಗಳಿಗೆ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೇಸ್ಟ್ ಹಾಗೂ ಟೂತ್ ಬ್ರಷ್ ವಿತರಣೆ ಮಾಡಲಾಯಿತು. ಇದೇ ಸಮಯದಲ್ಲಿ ಎಲ್.ಕೆ.ಜಿ. ಯಿಂದ 7 ನೇ ತರಗತಿ ಮಕ್ಕಳಿಗೆ ವೈಸ್ಟ್ ಕೋಟ್ (ಜಾಕೇಟ್) ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾರತೀಯ ದಂತ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ. ಗೌತಮ್,
ಡಾ. ಮೇಜರ್ ವಿಕ್ರಂ, ಡಾ. ಮಂಜುನಾಥಸ್ವಾಮಿ ಕೊಪ್ಪದ್, ಡಾ. ಸತೀಶ್ ಚಂದ್ರ, ಮುಖ್ಯ ಶಿಕ್ಷರಾದ ದಾನೇಶ್ವರಿ ಹಾಗೂ ಇತರರು ಹಾಜರಿದ್ದರು.