ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಲು ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕರೆ ನೀಡಿದರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸ್ಯಾಚುರೇಶನ್ ಕ್ಯಾಂಪನ್ನು ಕೊಂನಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜುಲೈ 31ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ಉದ್ಘಾಟಿಸಿ ನಂತರ ಮಾತನಾಡಿದರು ಜನರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಜಿಲ್ಲೆಯಲ್ಲಿ ಪಿ.ಎಂ.ಜೆ.ಜೆ.ಬಿ.ವೈ ಪಿ.ಎಂ.ಎಸ್ .ಬಿ.ವೈ ಅಟಲ್ ಪೆನ್ಷನ್ ಯೋಜನೆಗಳ ಬಗ್ಗೆ ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸುವ ಉದ್ದೇಶದಿಂದ ಜುಲೈ 1 ರಿಂದ ಸೆಪ್ಟಂಬರ್ 30ರವರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಮಾನ್ಯ ಜನರನ್ನು ಆರ್ಥಿಕ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಹಾಗೂ ಈ ಯೋಜನೆಗಳನ್ನು ತಲುಪುವಿಸುವ ಉದ್ದೇಶವಾಗಿದೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಇದು ಅಪಘಾತ ವಿಮಾ ಯೋಜನೆಯಾಗಿದ್ದು ಅಪಘಾತ ಉಂಟಾದಾಗ ಅಥವಾ ಅಂಗವಿಕಲವಾದರೆ ಈ ಹಣ ಪಡೆಯಬಹುದಾಗಿರುತ್ತದೆ ಉಳಿತಾಯ ಖಾತೆ ಹೊಂದಿರುವ ಪ್ರತಿಯೊಬ್ಬ ನಾಗರಿಕನು ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ.

18 ವರ್ಷದಿಂದ 70 ವರ್ಷದ ನಾಗರಿಕರು ಪ್ರತಿ ವರ್ಷಕ್ಕೆ 20 ರೂ ಪಾವತಿಸಿದರೆ ಅಪಘಾತವಾದಾಗ ಎರಡು ಲಕ್ಷದಷ್ಟು ಹಣವನ್ನು ಪಡೆದುಕೊಳ್ಳಬಹುದಾಗಿದೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ 18 ರಿಂದ 50 ವರ್ಷದೊಳಗಿನ ಎಲ್ಲಾ ಉಳಿತಾಯ ಖಾತೆದಾರರು ಈ ಯೋಜನೆ ಅರ್ಹರಾಗಿದ್ದು ವಾರ್ಷಿಕ 436 ರೂಪಾಯಿ ಪ್ರೀಮಿಯಂ ಪಾವತಿಸಿದರೆ ಸಾವು ಸಂಭವಿಸಿದರೆ 2 ಲಕ್ಷ ರೂಪಾಯಿ ವಿಮಾ ಮೊತ್ತವನ್ನು ಪಡೆಯಬಹುದಾಗಿರುತ್ತದೆ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಹಾಗೂ ಅಟಲ್ ಪೆನ್ಷನ್ ಯೋಜನೆ ಇದರ ಉಪಯೋಗವನ್ನು ಪಡೆದುಕೊಳ್ಳಲು ಕೋರಿದರು.

ನಂತರ ಮಾತನಾಡಿದ ಕೆನರಾ ಬ್ಯಾಂಕ್ ಡ್ಯೆಪುಟಿ ಜನರಲ್ ಮ್ಯಾನೇಜರ್ ದೇವರಾಜ್ ಅವರು ಜಿಲ್ಲೆಯಲ್ಲಿ 2024 25ರ ಆರ್ಥಿಕ ವರ್ಷದಲ್ಲಿ ಅಟಲ್ ಪೆನ್ಷನ್ ಯೋಜನೆ ಅಡಿಯಲ್ಲಿ .4,850, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 22611, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಅಡಿಯಲ್ಲಿ30196 ಜನ ಮಾತ್ರ ಅರ್ಹರಾಗಿದ್ದು ಈ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಬಹಳ ಕಡಿಮೆಯಾಗಿದ್ದು ಇದನ್ನು ಹಂತ ಹಂತವಾಗಿ ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೆ ತಿಳಿಸುವುದು ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು ಲೀಡ್ ಬ್ಯಾಂಕ್ ನ ಮ್ಯಾನೇಜರ್ ಹನುಮಂತಪ್ಪ ಅವರು ಸೈಬರ್ ಕ್ರೈಂ ಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಸ್ವಉದ್ಯೋಗ ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಇದರ ಪ್ರಯೋಜನವನ್ನು ಪಡೆಯುವ ಬಗ್ಗೆ ಮಾಹಿತಿ ನೀಡಲಾಯಿತು ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯ ವಿಮೆ ಮೊತ್ತವನ್ನು ಪಾವತಿಸಲಾಯಿತು ಕಾರ್ಯಕ್ರಮದಲ್ಲಿ ಡಿವಿಜನ್ ಮ್ಯಾನೇಜರ್ ವೀರರಾಘವನ್ ಶಿವಾನಂದ ಅಸುಂಡಿ ಫೈನಾನ್ಸಿಯಲ್ ಲಿಟ್ರೇಸಿ ಕೋಆರ್ಡಿನೇಟರ್ ಶಂಕ್ರಪ್ಪ ಬಿ ಆರ್ ಕೆನರಾ ಬ್ಯಾಂಕಿನ ಉದ್ಯೋಗಿಗಳು ಉಪಸ್ಥಿತರಿದ್ದರು.