ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ 02ರಂದು ಶ್ರೀ ರವಿ ಪಾಟೀಲ್ ಪಿಐ ದೊಡ್ಡಪೇಟೆ ಪೊಲೀಸ್ ಠಾಣೆ ರವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ, ಠಾಣಾ ವ್ಯಾಪ್ತಿಯಲ್ಲಿರುವ ಫ್ಲೆಕ್ಸ್ ಮತ್ತು ಬ್ಯಾನರ್ ನ ಪ್ರಿಂಟರ್ಸ್ ಗಳ ಮಾಲೀಕರ ಸಭೆ ನಡೆಸಿ ಈ ಕೆಳಕಂಡ ಸೂಚನೆಗಳನ್ನು ನೀಡಿದರು.

1) ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಪ್ರಿಂಟ್ ಮಾಡುವ ಪ್ರಿಂಟರ್ಸ್ ರವರು ಅವರಿಗೆ ಪ್ರಿಂಟ್ ಹಾಕಲು ಹೇಳಿದವರ ಹೆಸರು ಮತ್ತು ದೂರವಾಣಿ ಸಂಖ್ಯೆ ಹಾಗೂ ಫ್ಲೆಕ್ಸ್ ಪ್ರಿಂಟ್ ಮಾಡಿಕೊಡುತ್ತಿರುವ ಪ್ರಿಂಟರ್ಸ್ ರವರ ಹೆಸರು ಮತ್ತು ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ಆಯಾ ಫ್ಲೆಕ್ಸ್ ಮತ್ತು ಬ್ಯಾನರ್ ಗಳ ಮೇಲೆ ನಮೂದು ಮಾಡುವುದು.

2) ಫ್ಲೆಕ್ಸ್ ಮತ್ತು ಬ್ಯಾನರ್ ಗಳಲ್ಲಿ ಯಾವುದೇ ಕಾರಣಕ್ಕೂ ಇತರ ಭಾವನೆಗಳಿಗೆ ದಕ್ಕೆಯಾಗುವಂತಹ ಮತ್ತು ಆಕ್ಷೇಪಾರ್ಹ ಮಾಹಿತಿ / ಚಿತ್ರಗಳನ್ನು ಪ್ರಿಂಟ್ ಮಾಡಿಕೊಡಬಾರದು ಮತ್ತು ಪ್ರಿಂಟ್ ಮಾಡಿಕೊಡುತ್ತಿರುವ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನುಗಳ Soft Copy ಯನ್ನು ಸರಹದ್ದಿನ ಪೊಲೀಸ್ ಠಾಣೆಗೆ ನೀಡಬೇಕು.

3) ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಪ್ರಿಂಟ್ ಮಾಡುಲು ಕೊಡುವವರ ಹೆಸರು, ದೂರವಾಣಿ ಸಂಖ್ಯೆ, ವಿಳಾಸದ ವಿವರಗಳನ್ನು ರಿಜಿಸ್ಟರ್ ನಲ್ಲಿ ನಮೂದಿಸಬೇಕು ಮತ್ತು ಅದರ ಮಾಹಿತಿಯನ್ನು ಕಡ್ಡಾಯವಾಗಿ ಸಂಬಂಧಪಟ್ಟ ಸರಹದ್ದಿನ ಪೊಲೀಸ್ ಠಾಣೆಗೆ ಆ ದಿನವೇ ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಫ್ಲೆಕ್ಸ್ ಮತ್ತು ಬ್ಯಾನರ್ ಗಳ ಪ್ರಿಂಟರ್ಸ್ ಗಳ ಮಾಲೀಕರು ಉಪಸ್ಥಿತರಿದ್ದರು.