ವಿಕಲಚೇತನರ ಕಲ್ಯಾಣ ಇಲಾಖೆಯ ವತಿಯಿಂದ ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಆಯೋಜಿಸಲಾದ ವಿಶೇಷ ಚೇತನರ ಸಲಕರಣೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ ಅವರಿಂದ ಶ್ರವಣ ಸಾಧನಗಳು, ಟಾಕಿಂಗ್ ಲ್ಯಾಪ್‌ಟಾಪ್, ವೈದ್ಯಕೀಯ ವೆಚ್ಚಗಳ ಮರುಪಾವತಿ ಚೆಕ್ ಹಾಗೂ ತ್ರಿಚಕ್ರ ವಾಹನವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾರ್ಯಕ್ರಮವು ವಿಕಲಚೇತನರು ನಿತ್ಯಜೀವನದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂಬ ಉದ್ದೇಶದೊಂದಿಗೆ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದರು.
ಕಾರ್ಯಕ್ರಮದ ವೇಳೆ ವಿಕಲಚೇತನರ ಜಿಲ್ಲಾ ಕಲ್ಯಾಣಧಿಕಾರಿಗಳಾದ ಶ್ರೀಮತಿ ಸುವರ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಪ್ರಮುಖರಾದ ಜ್ಞಾನೇಶ್ವರ್, ದೀನ್ ದಯಾಳ್, ನವಲೆ ಮಂಜುನಾಥ್, ಶ್ರೀನಾಗ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.