ಹೊಸನಗರ ತಾಲೂಕು ಪಂಚಾಯತದಲ್ಲಿ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಕಾಯಂ ಲೋಕ ಅದಾಲತ್ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಶಿವಮೊಗ್ಗದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಎಂ ಎಸ್ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯು ಮಂಗಳೂರಿನಲ್ಲಿ ಸ್ಥಾಪಿಸಲಾದ ಖಾಯಂ ಲೋಕ ತಾಲೂಕಿನ ವ್ಯಾಪ್ತಿಯಲ್ಲಿ ಒಳಪಡುತ್ತಿದ್ದು ಅಲ್ಲಿ ಸಾರ್ವಜನಿಕ ಉಪಯುಕ್ತ ಸೇವೆಯನ್ನು ನೀಡುತ್ತಿರುವ ಸಂಸ್ಥೆಗಳು ಹಾಗೂ ಅಂತಹ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಪ್ರಕರಣವನ್ನು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೆ ದಾಖಲಿಸಬಹುದು ಮತ್ತು ರಾಜ್ಯ ಸಂಧಾನದ ಮೂಲಕ ಅಥವಾ ವಿಚಾರಣೆಯ ಮೂಲಕ ನ್ಯಾಯಾಲಯದಲ್ಲಿ ನೀಡುವಂತಹ ತೀರ್ಪನ್ನು ಒಂದು ಕೋಟಿ ರೂಪಾಯಿ ಮೊತ್ತದ ಒಳಗಿನ ಪರಿಹಾರವನ್ನು ಪಡೆದುಕೊಳ್ಳಬಹುದು ಹಾಗೂ ಅಂತಹ ತೀರ್ಪಿನ ವಿರುದ್ಧ ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಆದ್ದರಿಂದ ಈ ಕಾಯಂ ಲೋಕ ಅದಾಲತ್ ನ ಸೇವೆಯ ಉಪಯೋಗವನ್ನು ಸಾರ್ವಜನಿಕರು ಮತ್ತು ಸಾರ್ವಜನಿಕ ಉಪಯುಕ್ತ ಸೇವೆಗಳನ್ನು ನೀಡುವ ಸಂಸ್ಥೆಗಳು ಪಡೆದುಕೊಳ್ಳಬೇಕು ಎಂದು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರೆಕಾಲಿಕ ಸ್ವಯಂಸೇವಕರಾದ ಶ್ರೀ ವೆಂಕಟೇಶ್ ಎಸ್ ಬಿ ರವರು ವಿಷಯದ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ತಾಲೂಕು ಪಂಚಾಯತ್ತಿನ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.