ಖಾಯಂ ಲೋಕ್ ಅದಾಲತ್ ಒಂದು ವಿಶೇಷ ನ್ಯಾಯಾಲಯವಾಗಿದ್ದು, ಪ್ರಕರಣಗಳ ರಾಜಿ ಸಂಧಾನವೇ ಈ ನ್ಯಾಯಾಲಯದ ಮೊದಲ ಆದ್ಯತೆಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸAತೋಷ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಪಂಚಾಯತ್, ಕುವೆಂಪು ವಿಶ್ವವಿದ್ಯಾಲಯದ, ಸಾರ್ವಜನಿಕÀ ಶಿಕ್ಷಣ ಇಲಾಖೆ, ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ, ಮೆಸ್ಕಾಂ, ಖಾಸಗಿ ಮತ್ತು ರಾಷ್ಟಿçÃಕೃತ ಬ್ಯಾಂಕ್‌ಗಳು, ಸಹಕಾರಿ ಸಂಘ ಸಂಸ್ಥೆಗಳು, ಸಾರಿಗೆ ಇಲಾಖೆ, ಬಿಎಸ್‌ಎನ್‌ಎಲ್, ಇನ್ಶೂರೆನ್ಸ್ ಕಂಪನಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಜಿ.ಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಖಾಯಂ ಲೋಕ್ ಅದಾಲತ್ ಕುರಿತಾದ ಜಾಗೃತಿ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಉಪಯುಕ್ತ ಸೇವೆಗೆ ಸಂಬAಧಿಸಿದAತೆ ಇದೊಂದು ವಿಶೇಷ ವೇದಿಕೆ ಆಗಿದ್ದು, ಪ್ರಯಾಣಿಕರನ್ನು ಅಥವಾ ಸರಕನ್ನು ಸಾಗಿಸುವ ಭೂ ಸಾರಿಗೆ, ಜಲಸಾರಿಗೆ, ವಾಯು ಸಾರಿಗೆ ಸೇವೆಗಳು, ಅಂಚೆ, ತಂತಿ, ದೂರವಾಣಿ ಸೇವೆಗಳು, ವಿದ್ಯುತ್, ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ ಹಾಗೂ ಚರಂಡಿ ವ್ಯವಸ್ಥೆ, ವಿಮಾ ಸೇವೆ, ಆಸ್ಪತ್ರೆ ಹಾಗೂ ಔಷಧಾಲಯಗಳ ಸೇವೆ, ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್ ಸೇವೆ, ಶಿಕ್ಷಣ ಅಥವಾ ಶಿಕ್ಷಣ ಸಂಸ್ಥೆಗಳ ಸಂಬAಧಪಟ್ಟ ಸೇವೆ, ಗೃಹ ಹಾಗೂ ರಿಯಲ್ ಎಸ್ಟೇಟ್ ಸೇವೆ ಒಳಗೊಂಡAತೆ ಇನ್ನಿತರ ಸಾರ್ವಜನಿಕ ಉಪಯುಕ್ತ ಸೇವೆಗಳ ಪ್ರಕರಣಗಳನ್ನು ಈ ನ್ಯಾಯಾಲಯದಲ್ಲಿ ಸಲ್ಲಿಸಬಹುದು.
ಇತರೆ ನ್ಯಾಯಾಲಯಗಳಂತೆ ಇಲ್ಲಿ ಶುಲ್ಕ ಕಟ್ಟವಂತಿಲ್ಲ ಹಾಗೂ ಯಾವುದೇ ಆದಾಯದ ಮಿತಿ ಇರುವುದಿಲ್ಲ. ಈ ಖಾಯಂ ಲೋಕ್ ಅದಾಲತ್ ರಾಜ್ಯದ 6 ಜಿಲ್ಲೆಗಳಲ್ಲಿ ಕಚೇರಿ ಹೊಂದಿದೆ. ಶಿವಮೊಗ್ಗ ಜಿಲ್ಲೆಯು ಮಂಗಳೂರಿನ ವ್ಯಾಪ್ತಿಗೆ ಬರಲಿದೆ ಎಂದರು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅಧ್ಯಕ್ಷರಾಗಿ ಹಾಗೂ ಸಾರ್ವಜನಿಕ ಉಪಯುಕ್ತ ಸೇವೆಗಳ ಬಗ್ಗೆ 15 ರಿಂದ 20 ವರ್ಷಗಳ ಅನುಭವ ಹೊಂದಿರುವ ಇಬ್ಬರು ಸದಸ್ಯರು ಕರ್ನಾಟಕ ರಾಜ್ಯ ಸರ್ಕಾರದ ನಾಮನಿರ್ದೇಶನ ಮಾಡಿದಂತೆ ಈ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ರೂ.1 ಕೋಟಿ ಮೌಲ್ಯದ ವ್ಯಾಜ್ಯಗಳನ್ನು ಅಥವಾ ಹಣಕಾಸಿ ವ್ಯವಹಾರದ ಅರ್ಜಿಯನ್ನು ದಾಖಲಿಸಬಹುದು. ಪ್ರಕರಣಗಳನ್ನು ತ್ವರಿತಗತಿಯಲ್ಲಿ ಆದೇಶವನ್ನು ನೀಡಲಿದ್ದು, ಒಂದೇ ವಿವಾದಕ್ಕೆ ಸಂಬAಧಿಸಿದAತೆ ಬೇರೆ ನ್ಯಾಯಾಲಯದಲ್ಲಿ ದಾವೆ ಇದ್ದ ಪ್ರಕರಣಗಳ ಕುರಿತು ಖಾಯಂ ಲೋಕ್ ಅದಾಲತ್ ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
ಉಭಯಪಕ್ಷಗಾರರು ರಾಜೀ ಸಂಧಾನಕ್ಕೆ ಒಪ್ಪದೇ ಇದ್ದಾಗ ವಿವಾದವನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರ ಈ ನ್ಯಾಯಾಲಯಕ್ಕಿದ್ದು, ನಂತರ ತೀರ್ಪನ್ನು ಪ್ರಕಟಿಸಬಹುದು. ಅರ್ಜಿದಾರರಿಗೆ ಈ ತೀರ್ಪು ಸರಿ ಹೊಂದದೇ ಇದ್ದರೆ ಸಿವಿಲ್ ಹಾಗೂ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿರುವುದಿಲ್ಲ. ಆದರೆ ನೇರವಾಗಿ ರಿಟ್ ಮೂಲಕ ಹೈ ಕೊರ್ಟ್ಗೆ ನಲ್ಲಿ ಪ್ರಶ್ನಿಸಬಹುದು.
ಸಾರ್ವಜನಿಕರು ಅಧಿಕಾರಿಗಳ ಸಣ್ಣ ಪುಟ್ಟ ಲೋಪಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ಖಾಯಂ ಲೋಕ್ ಅದಾಲತ್‌ನಲ್ಲಿ ದಾವೆ ಹೂಡಬಹುದು. ಹಾಗಾಗಿ ಅಧಿಕಾರಿಗಳಿಗೆ ಖಾಯಂ ಲೋಕ್ ಅದಾಲತ್ ಬಗ್ಗೆ ಅರಿವಿರಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಅರಿವು ಮೂಡಿಸಲು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.ಈ ಅದಾಲತ್‌ನಲ್ಲಿ ಬರೀ ಸಾರ್ವಜನಿಕರು ಮಾತ್ರವಲ್ಲದೆ ಅಧಿಕಾರಿಗಳು ಕೂಡ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳ ವಿರುದ್ದ ದಾವೆ ಹಾಕಬಹುದು ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸ್ವಯಂ ಸೇವಕರಾದ ಎಸ್.ಬಿ.ವೆಂಕಟೇಶ್ ಮಾತನಾಡಿ, ಸಾರ್ವಜನಿಕರಿಗೆ ಖಾಯಂ ಲೋಕ್ ಅದಾಲತ್ ಬಗ್ಗೆ ತಿಳಿದಿಲ್ಲ. ಹಾಗೂ ಅದನ್ನು ಹೇಗೆ ಬಳಸಿಕೊಳ್ಳಬೇಕೆಂಬ ಮಾಹಿತಿಯೂ ಇಲ್ಲ. ಅದಾಲತ್‌ನಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪ್ರಕರಣಗಳನ್ನು ದಾಖಲಿಸಬಹುದಾಗಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರ್ಜಿ ಲಭ್ಯವಿರುತ್ತದೆ. ಇದನ್ನು ಸಲ್ಲಿಸುವಾಗ ಅರ್ಜಿಯೊಂದಿಗೆ ಸಂಬAಧಿತ ಮಾಹಿತಿ ಹಾಗೂ ದಾಖಲೆಗಳ ಜೆರಾಕ್ಸ್ ಪ್ರತಿಯನ್ನು ಕೊಡಬೇಕು. ಇದರಲ್ಲಿ ದಾವೆ ಹೂಡಿರುವರು ನಮಗೆ ಬೇಕಾದ ಪರಿಹಾರವನ್ನು ಕೇಳುವ ಅಧಿಕಾರಿ ಹೊಂದಿದ್ದು, ಇದರ ತೀರ್ಪು ಸಿವಿಲ್ ನ್ಯಾಯಾಲಯದ ತೀರ್ಪಿಗೆ ಸಮವಾಗಿರುತ್ತದೆ. ಖಾಯಂ ಲೋಕ್ ಅದಾಲತ್ ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರೂ ಪಕ್ಷಗಾರರು ಹಾಜರಿರಬೇಕು. ಇಲ್ಲದಿದರೆ ಏಕಪಕ್ಷೀಯವಾಗಿ ತೀರ್ಪು ನೀಡಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಾದಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ(ಅಭಿವೃದ್ದಿ) ಕೆ.ಜಯಲಕ್ಷಿö್ಮ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ಆರ್.ಬಿ.ನಂದಿನಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಎಲ್.ಹನುಮನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಕೆ.ಎಸ್.ಶ್ರೀಕಾಂತ್, ಮಹಾನಗರ ಪಾಲಿಕೆ ಉಪ ಆಯುಕ್ತರಾದ ವಿರುಪಾಕ್ಷಪ್ಪ ಪೂಜಾರ್, ತಾಲ್ಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ತಾರಾ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.