ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮಳೆ ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷಿತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವAತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ.
ಪರ್ಯಾಯ ಮಾರ್ಗ…
ತೀರ್ಥಹಳ್ಳಿಯಿಂದ ರಾವೆ- ಕಾನಗೋಡು- ಮಾಸ್ತಿಕಟ್ಟೆ- ಹುಲಿಕಲ್ ಘಾಟ್- ಹೊಸಂಗಡಿ -ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ-ರಾವೆ-ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ ರಸ್ತೆ ಮೂಲಕ ಸಂಚರಿಸುವುದು.
ನಗರ ಸಿದ್ದಾಪುರ ರಾಜ್ಯ ಹೆದ್ದಾರಿ-278 ರಸ್ತೆ ತೀರ್ಥಹಳ್ಳಿಯಿಂದ ಯಡೂರು-ಸುಳಗೋಡು-ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ ಮೂಲಕ ಕುಂದಾಪುರದ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ-ಯಡೂರು-ಮಾಸ್ತಿಕಟ್ಟೆ-ಕಾನುಗೋಡು-ನಗರ-ಕೊಲ್ಲೂರು-ಕುಂದಾಪುರ ರಸ್ತೆ ಮೂಲಕ ಸಂಚರಿಸುವುದು.
ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ-ನಗರ-ಮಾಸ್ತಿಕಟ್ಟೆ-ಹುಲಿಕಲ್ ಘಾಟ್-ಹೊಸಂಗಡಿ-ಸಿದ್ದಾಪುರ ಮೂಲಕ ಕುಂದಾಪುರದ ಕಡೆ ಹೋಗುವ ಭಾರಿ ವಾಹನಗಳು ಶಿವಮೊಗ್ಗ ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮೂಲಕ ಹೊನ್ನಾವರ ಆನಂತರ ಹೊನ್ನಾವರದಿಂದ ಭಟ್ಕಳ-ಬೈಂದೂರು- ಕುಂದಾಪುರ ರಸ್ತೆಯ ಮೂಲಕ ಸಂಚರಿಸುವAತೆ ಆದೇಶ ಹೊರಡಿಸಿದ್ದಾರೆ.