ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಳೆಸಲು ಸೌಹಾರ್ದತೆಯ ಸಮಾಜವನ್ನು ನಿರ್ಮಿಸಲು, ಹಾಗೂ ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹತ್ವಾಕಾಂಕ್ಷೆಯ ಯೋಜನೆಯಾದ “ಮನೆ-ಮನೆಗೆ ಪೊಲೀಸ್" ಪರಿಕಲ್ಪನೆಯನ್ನು ಶಿವಮೊಗ್ಗ ಜಿಲ್ಲೆಯಾದ್ಯಂತ ಜಾರಿಗೆ ತರಲಾಗಿರುತ್ತದೆ.
ಸದರಿ ಕಾರ್ಯಕ್ರಮದ ಭಾಗವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ಮಟ್ಟದಲ್ಲಿ, *"ಮನೆ ಮನೆಗೆ ಪೊಲೀಸ್ ಯೋಜನೆ" ಯ ಭಾಗವಾದ ಕ್ಲಸ್ಟರ್ ಸಮೂಹ ಸದಸ್ಯರನ್ನು ಹಾಗೂ ಕ್ಲಸ್ಟರ್ ಮುಖ್ಯಸ್ಥರನ್ನು ಆಯಾ ಪೊಲೀಸ್ ಠಾಣೆಗಳಿಗೆ ಕರೆಸಿ, ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳ ನೇತೃತ್ವದಲ್ಲಿ, ಸಭೆ ನಡೆಸಿ ಅವರುಗಳಿಗೆ ಸದರಿ ಕಾರ್ಯಕ್ರಮದ ಕುರಿತು ಸಂಪೂರ್ಣವಾದ ಮಾಹಿತಿ ನೀಡಿ, ಜಾಗೃತಿ ಮೂಡಿಸಿರುತ್ತಾರೆ
.
ಹಾಗೂ ಸಾರ್ವಜನಿಕರುಗಳ ಕುಂದುಕೊರತೆಗಳನ್ನು ಆಲಿಸಿ, ಕಾನೂನು ವ್ಯಾಪ್ತಿಯಲ್ಲಿ ಕುಂದು ಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿರುತ್ತಾರೆ.ನಿಮ್ಮ ಮನೆಗಳಿಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆ, ಠಾಣಾಧಿಕಾರಿಗಳು ಹಾಗೂ ಬೀಟ್ ಸಿಬ್ಬಂಧಿಯವರ ಮಾಹಿತಿಯ ಸ್ಟಿಕ್ಕರ್ ಗಳನ್ನು ಅಂಟಿಸಲಾಗಿದ್ದು, ಯಾವುದೇ ಸಮಸ್ಯೆಗಳಿಗೆ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಹಾಗೂ ತುರ್ತು ಸಹಾಯವಾಣಿ 112 ಗೆ ಕರೆ ಮಾಡುವಂತೆ ಮಾಹಿತಿ ನೀಡಿರುತ್ತಾರೆ.