ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಮಾಜಿ ಹಾಗೂ ಹಾಲಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ನಗರದ ‘ಸೈನಿಕ ಆರಾಮ ಗೃಹ’ದಲ್ಲಿ ವಾಸ್ತವ್ಯಕ್ಕಾಗಿ ಕೊಠಡಿಗಳನ್ನು ಬಾಡಿಗೆ ಆಧಾರದ ಮೇಲೆ ನೀಡಲಾಗುತ್ತದೆ.

ಕೊಠಡಿಗಳು 24/7 ಲಭ್ಯ ಇದ್ದು, ದೂ.ಸಂ: 9141166157 ಕ್ಕೆ ಕರೆ ಮಾಡಿ ಅಥವಾ ವಾಟ್ಸ್ ಅಪ್ ಮೂಲಕ ಸಂದೇಶ ಕಳಿಸಿ ಮುಂಗಡ ಪಾವತಿಸಿ, ಕೊಠಡಿಗಳನ್ನು ಕಾಯ್ದಿರಿಸಬಹುದು. ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಆದ್ಯತೆ ನೀಡಲಾಗುವುದು.


ಮುಂಗಡ ಕಾಯ್ದಿರಿಸದವರಿಗೂ ಲಭ್ಯತೆಗನುಗುಣವಾಗಿ ಕೊಠಡಿಗಳನ್ನು ಪಡೆಯಲು ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ದೂ.ಸಂ: 08182220925 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.