ಬ್ಯಾಂಕಿನ ಶ್ರೇಷ್ಠ ಸಾಧನೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಶಿವಮೊಗ್ಗವನ್ನು ಉತ್ತಮ ಡಿಸಿಸಿ ಬ್ಯಾಂಕ್ ಎಂದು ಆಯ್ಕೆ ಮಾಡಿ, 13ರಂದು ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ವಾರ್ಷಿಕ ಮಹಾ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಿದ್ದು, ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಹಾಗೂ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಸಿ. ರಾಜಣ್ಣ ರೆಡ್ಡಿ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಬ್ಯಾಂಕಿಗೆ ಸಂದ ಈ ಗೌರವವು ಜಿಲ್ಲೆಯ ರೈತರಿಗೆ ಹಾಗೂ ಗ್ರಾಹಕರಿಗೆ ಸಂದ ಗೌರವವಾಗಿದೆ ಎಂದು ತಿಳಿಸಿ ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ಅಧ್ಯಕ್ಷರು ಹಾಗೂ ಆಡಳಿತ ಮಂಡಲಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.