79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಶಯಗಳನ್ನು ಕೋರಿದರು.

ನಂತರ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ, ಬೆರಳು ಮುದ್ರೆ ಘಟಕ, ಕೋರ್ಟ್ ಮಾನಿಟರಿಂಗ್ ಸೆಲ್ ಹಾಗೂ ಡಿಎಆರ್ ಘಟಕದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ/ ಸಿಬ್ಬಂಧಿ ಮತ್ತು ಲಿಪಿಖ ಸಿಬ್ಬಂಧಿಗಳು ಸೇರಿದಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಒಟ್ಟು 25 ಜನ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶ್ರೀ ಕಾರ್ಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ರಮೇಶ್ ಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2 ಶಿವಮೊಗ್ಗ ಜಿಲ್ಲೆ ಮತ್ತು ಶಿವಮೊಗ್ಗ ನಗರದ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್‌ ಕಛೇರಿಯ ಅಧಿಕಾರಿ ಸಿಬ್ಬಂದಿಗಳು ಮತ್ತು ಲಿಪಿಖ ಸಿಬ್ಬಂದಿಗಳು ಉಪಸ್ಥಿತರಿದ್ದರು.