ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಹೊಸ ಅಪರಾಧಿಕಾ ಕಾನೂನು ಭಾರತೀಯ ನ್ಯಾಯ ಸಂಹಿತಾ – 2023 ರ ಕಲಂ 111, 112 ಮತ್ತು 113 ನ ಬಗ್ಗೆ ಹಾಗೂ ಸದರಿ ಕಲಂಗಳಲ್ಲಿ ಕೈಗೊಳ್ಳಬೇಕಾದ ತನಿಖಾ ಕ್ರಮ ಮತ್ತು ಪ್ರಕ್ರಿಯೆಗಳ ಬಗ್ಗೆ ವಿವರಿಸಿದ್ದು.

ಮುಂಬರುವ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಮಾನ್ಯ ಇಲಾಖಾ ಮೇಲಧಿಕಾರಿಗಳು ನೀಡಿದ ಸಲಹೆ ಸೂಚನೆಗಳನ್ನು ವಿವರಿಸಿ ತಿಳಿಸಿರುತ್ತಾರೆ. ಈ ಸಂದರ್ಭದಲ್ಲಿ ಸಂಬಂಧಪಟ್ಟ ಪೊಲೀಸ್ ವೃತ್ತ ನಿರೀಕ್ಷರು, ಪೊಲೀಸ್ ಉಪಾಧೀಕ್ಷಕರುಗಳು* ಉಪಸ್ಥಿತರಿದ್ದರು.