ಸರ್ಕ್ಯೂಟ್ ಹೌಸ್ ಸರ್ಕಲ್‌ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟಾಟಾ ಏಸ್ ನಂದಿನಿ ಹಾಲಿನ ವಾಹನಕ್ಕೆ ಸಾಗರ ರಸ್ತೆ ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ.ಮೃತಪಟ್ಟವರನ್ನ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಆದಿತ್ಯ 21 ಮತ್ತು ಸಂದೀಪ್ 21 ಮೃತರಾಗಿದ್ದಾರೆ.ಇವರಲ್ಲಿ ಒಬ್ಬರು ಸುರಹೊನ್ಬೆಯವರು ಮತ್ತೊಬ್ಬರು ಊಡುಪಿ ಜಿಲ್ಲೆಯವರಾಗಿದ್ದಾರೆ.
ಆದಿತ್ಯ ಮತ್ತು ಸಂದೀಪ್ ಕೆಳಗೆ ಬಿದ್ದು ಗಾಯಗೊಂಡು, ತೀವ್ರ ರಕ್ತಸ್ರಾವ ಉಂಟಾಗಿದೆ. ರಸ್ತೆ ಮೇಲೆ ರಕ್ತ ಮಡುವಿನಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಹಾಲಿನ ವಾಹನದಲ್ಲಿದ್ದ ಹಾಲಿನ ಕ್ರೇಟ್‌ಗಳೆಲ್ಲ ಕೆಳಗೆ ಬಿದ್ದು ಪ್ಯಾಕೆಟ್‌ಗಳು ಒಡೆದು ರಸ್ತೆಯ ಮೇಲೆ ಹಾಲು ಹರಿದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ವಿದ್ಯಾರ್ಥಿಗಳ ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.