ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ಧತಿಯ ದೃಶ್ಯ ಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ.ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದು ಚಿತ್ರಕಲೆ ವಿಭಾಗ, ಗ್ರಾಫಿಕ್ಸ್ ವಿಭಾಗ ಮತ್ತು ಶಿಲ್ಪಕಲೆ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕೋತ್ತರ ಪದವಿಯಾಗಿರುತ್ತದೆ. ಪ್ರಥಮ ವರ್ಷದ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ (ಎಂ.ವಿ.ಎ) ಪ್ರವೇಶಾತಿಗಾಗಿ ಚಿತ್ರಕಲೆ ವಿಭಾಗ, ಗ್ರಾಫಿಕ್ಸ್ ವಿಭಾಗ ಮತ್ತು ಶಿಲ್ಪಕಲೆ ವಿಭಾಗಗಳಿಗೆ ಕಛೇರಿಯಿಂದ ಅರ್ಜಿಗಳನ್ನು ಪಡೆದು ಸಲ್ಲಿಸಲು ದಿನಾಂಕ: 30-08-2025 ರಂದು ಅಂತಿಮ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯುಕ್ತಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಯನ್ನು ಸಂಪರ್ಕಿಸಬಹುದೆಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.