ದಿನಾಂಕ 22. 8. 2025 ರಂದು ಭದ್ರಾವತಿ ತಾಲೂಕು ಹೊಳೆಹೊನ್ನೂರು ಇಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 63 ಪ್ರಕರಣಗಳನ್ನು ದಾಖಲಿಸಿ 4800 ರೂ ದಂಡವನ್ನು ಸಂಗ್ರಹಿಸಲಾಯಿತು.
ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಶ್ರೀ ಹೇಮಂತ್ ರಾಜ್ ಅರಸ್ K M ಜಿಲ್ಲಾ ಸಲಹೆಗಾರರು, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ಶ್ರೀ ರವಿರಾಜ್ ಜಿ ಕೆ, ಸಮಾಜ ಕಾರ್ಯಕರ್ತರು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ಶ್ರೀ ಆನಂದಮೂರ್ತಿ ಹಿರಿಯ ಆರೋಗ್ಯ ನಿರೀಕ್ಷಕರು, ಹೊಳೆ ಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ತಂಬಾಕು ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ COTPA ಕಾಯ್ದೆ ಕುರಿತು ಮಾಹಿತಿ ನೀಡಲಾಯಿತು.