ಶಿವಮೊಗ್ಗ ಬಿಜೆಪಿ ವತಿಯಿಂದ ರಾಮಣ್ಣ  ಶೆಟ್ಟಿ ಪಾರ್ಕಿನಿಂದ ನೆಹರು ರಸ್ತೆ ಮೂಲಕ ಗೋಪಿ ಸರ್ಕಲ್ಲಿಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.ನಗರದ ಶೀನಪ್ಪಶೆಟ್ಟಿ ವೃತ್ತದಲ್ಲಿ ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ಕೋಟ್ಯಂತರ ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಗೆ ಕಳಂಕ ತರಲು ಒಳಸಂಚು ನಡೆಸಿರುವವರ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚನ್ನಬಸಪ್ಪ ಸಮೀರ್ ಗೂ ಧರ್ಮಸ್ಥಳಕ್ಕೂ ಏನು ಸಂಬಂಧ? ಬುರುಡೆಯನ್ನ ತಂದ ಗ್ಯಾಂಗ್ ನ್ನ ನಂಬಬೇಡಿ ಎಂದು ಈ ಹಿಂದೆ ನಾವು ಆಗ್ರಹಿಸಿದ್ದೆವು. ಆದರೆ ಸರ್ಕಾರ ಇವರನ್ನ ನಂಬಿ ಎಸ್ ಐಟಿ ರಚಿಸಿತ್ತುಈಗ ಎಲ್ಲವೂ ಬೆಳಕಿಗೆ ಬರುತ್ತಿದೆ. ಷಡ್ಯಂತ್ರ ಬಟಾಬಯಲಾಗಿದೆ. ಕೆಲವು ನಕಲಿ ಹಿಂದೂ ಹೋರಾಟಗಾರರು ಷಡ್ಯಂತ್ರ ಮಾಡುವವರ ಜೊತೆಗೆ ಕೈ ಜೋಡಿಸಿದ್ದಾರೆ ಎಂದು ದೂರಿದರು.

ಇವರಿಗೆಲ್ಲಾ ಶಕ್ತಿ ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ. ಸಿದ್ಧರಾಮಯ್ಯ ಇರುವುದೇ ಹಿಂದೂಗಳ ಸರ್ವನಾಶಕ್ಕೆ. ಎಸ್ಐಟಿ ಕೂಡ ಷಡ್ಯಂತ್ರದಿಂದ ಕೂಡಿದೆ. ಹಿಂದೂ ಧರ್ಮದ ರಕ್ಷಣೆಗೆ ಶಕ್ತಿ ಕೊಡಿ ಎಂದು ನಾವೆಲ್ಲರೂ ಹೋಗಿ ಮಂಜುನಾಥನ ಸನ್ನಿಧಿಯಲ್ಲಿ ಬೇಡಿ ಬಂದಿದ್ದೇವೆ. ಸತ್ಯ ಹೊರಗೆ ಬಂದೇ ಬರುತ್ತದೆ ಎಂದರು.

ಸಂಸದ ಬಿ ವೈ ರಾಘವೇಂದ್ರ ಮಾತನಾಡಿ, ಹಿಂದೂ ವಿರೋಧಿ ಶಕ್ತಿಗೆ ರಾಜ್ಯ ಸರ್ಕಾರ ಪರೋಕ್ಷವಾಗಿ ಶಕ್ತಿ ತುಂಬಿ ಹಿಂದೂಗಳ ಶ್ರದ್ಧಾಕೇಂದ್ರಕ್ಕೆ ಕಪ್ಪು ಚುಕ್ಕೆ ಇಟ್ಟಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.

ಬಿಜೆಪಿಯಿಂದ ರಾಜ್ಯದೆಲ್ಲೆಡೆ ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಹಮ್ಮಿಕೊಂಡಿದ್ದೇವೆ. ನಮ್ಮ ಧರ್ಮ ಮತ್ತು ಸಂಸ್ಕೃತಿ ರಕ್ಷಣೆಗಾಗಿ ಧಾರ್ಮಿಕ ಅಸ್ಮಿತೆಗೆ ಧಕ್ಕೆ ಬಂದರೆ ರಸ್ತೆಗಿಳಿಯಲು ಸಿದ್ಧ ಎಂದು ಹೋರಾಟಕ್ಕಿಳಿದು ತಾಯಂದಿರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡಿದ್ದಾರೆ. 12 ವರ್ಷದ ಹಿಂದಿನ ಸೌಜನ್ಯ ಪ್ರಕರಣದ ಬಗ್ಗೆ ಈಗಾಗಲೇ ಹಲವು ತನಿಖಾ ಸಂಸ್ಥೆಗಳು ವರದಿ ನೀಡಿ ಧರ್ಮಸ್ಥಳಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಆದರೂ ಎಡಪಂಥೀಯರ ಮತ್ತು ಹಿಂದೂ ಧರ್ಮ ವಿರೋಧಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡಿದ್ದಾರೆ. 12 ವರ್ಷದ ಹಿಂದಿನ ಸೌಜನ್ಯ ಪ್ರಕರಣದ ಬಗ್ಗೆ ಈಗಾಗಲೇ ಹಲವು ತನಿಖಾ ಸಂಸ್ಥೆಗಳು ವರದಿ ನೀಡಿ ಧರ್ಮಸ್ಥಳಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಆದರೂ ಎಡಪಂಥೀಯರ ಮತ್ತು ಹಿಂದೂ ಧರ್ಮ ವಿರೋಧಿಗಳ ಷಡ್ಯಂತ್ರಕ್ಕೆ ಬಲಿಯಾಗಿ ಸರ್ಕಾರ ಎಸ್ಐಟಿ ರಚಿಸಿತು. ನಾವು ಕೂಡ ಅದನ್ನು ಸ್ವಾಗತಿಸಿದೆವು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಜ್ಞಾನೇಶ್ವರ್, ಮೋಹನ್ ರೆಡ್ಡಿ, ಜ್ಯೋತಿಪ್ರಕಾಶ್, ಮಾಲತೇಶ್, ದೀನದಯಾಳ್, ರಶ್ಮಿ ಶ್ರೀನಿವಾಸ್, ನಾಗರಾಜ್, ಸುನಿತಾ ಅಣ್ಣಪ್ಪ, ಮಂಜುನಾಥ್, ರಾಹುಲ್ ಬಿದರೆ, ವಿಶ್ವನಾಥ್, ಸಂಗೀತಾ ನಾಗರಾಜ್ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.