ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆ 2013 ಅನುಷ್ಟಾನಕ್ಕಾಗಿ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಆಂತರಿಕ ದೂರು ಸಮಿತಿಯನ್ನು ರಚಿಸದೇ ಇರುವ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆಗಳ ಮಾಲೀಕರು ಕೂಡಲೇ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಿ, ಅದರ ಆದೇಶ ಪ್ರತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


2013 ರ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ )ಕಾಯ್ದೆಯ ಅನುಷ್ಠನಕ್ಕಾಗಿ ಮಾನ್ಯ ಸರ್ವೊಚ್ಛ ನ್ಯಾಯಾಲಯವು ದಿ:12-08-2025 ರಂದು ನೀಡಿರುವ ನಿರ್ದೇಶನಗಳನ್ವಯ ಕಾಯ್ದೆಯು ಅನ್ವಯಿಸುವ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಪ್ರತಿ ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸದಿರುವುದು ಕಂಡುಬಂದಿರುತ್ತದೆ.

ಹಾಗಾಗಿ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಆಂತರಿಕ ದೂರು ಸಮಿತಿಯನ್ನು ರಚಿಸದೇ ಇರುವ ಅಂಗಡಿ, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆಗಳ ಮಾಲೀಕರು ಕೂಡಲೇ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಿ, ಅದರ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಅಧಿಕಾರಿಗಳ ಕಚೇರಿ 2 ನೇ ಮಹಡಿ ವಾಣಿಜ್ಯ ಸಂಕೀರ್ಣ, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ ವಿನೋಬನಗರ ಇಲ್ಲಿಗೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.