
ಅಮೃತ ಅನ್ನದಾಸೋಹ ಪ್ರತಿಷ್ಠಾನ ವತಿಯಿಂದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅನ್ನದಾಸೋಹದ ಪ್ರಮುಖರು ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಪ್ರಾರಂಭವಾದ ಅನ್ನದಾನ ಕಾರ್ಯಕ್ರಮ ನಾಳೆಗೆ ನೂರು ದಿನ ಪೂರೈಸಲಿದೆ. ಮಲೆನಾಡಿನ ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾದ ಅನ್ನದಾಸೋಹ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸಹಕಾರ ಸಿಕ್ಕಿದೆ. ಶಿವಮೊಗ್ಗದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮವಾಗಿ ಹೊರಹೊಮ್ಮಿದೆ.ಅನ್ನದಾನ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ವಿಶೇಷವಾಗಿ ದಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ಹೃದಯಪೂರ್ವಕ ಅಭಿನಂದನೆಗಳು ತಿಳಿಸಿದರು.
ನಾಳೆ 29ರಂದು ಶುಕ್ರವಾರ ಬೆಳಗ್ಗೆ 11.30ಕೆ ಮೆಗ್ಗಾನ್ ಆಸ್ಪತ್ರೆಯ ಆವಣದಲ್ಲಿರುವ ಚೌಡೇಶ್ವರಿ ದೇವಸ್ಥಾನ ಹತ್ತಿರ 100ನೇ ದಿನದ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬಸವ ಕೇಂದ್ರದ ಡಾ ಬಸವ ಮರುಳಸಿದ್ದ ಸ್ವಾಮೀಜಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ವೈದ್ಯಕೀಯ ಅಧೀಕ್ಷಕರಾದ ಡಾ ತಿಮ್ಮಪ್ಪ ನಿರ್ದೇಶಕರಾದ ಡಾ ವಿರುಪಾಕ್ಷಪ್ಪ ಜಿಲ್ಲಾ ಅಧಿಕ್ಷಕರಾದ ಡಾ ಸಿದ್ದನಗೌಡ ಆಗಮಿಸಲಿದ್ದಾರೆ. ಅನ್ನದಾನ ದಾನಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಯಾಗಿ ನಡೆಸಿಕೊಡಬೇಕಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀ ಯುತ ಎ ಸತೀಶ್ ಕುಮಾರ್ ಶೆಟ್ಟಿ.
ಉಪಾಧ್ಯಕ್ಷರಾದ ಶ್ರೀ ಯುತ ಪ್ರಭಾಕರ ಎನ್ ಹೆಚ್ ಕಾರ್ಯದರ್ಶಿಗಳಾದ ಶ್ರೀ ಯುತ ಟಿ ಆರ್ ಸತ್ಯನಾರಾಯಣ ನಿರ್ದೇಶಕರಾದ ದಿವಾಕರ್ ಶೆಟ್ಟಿ ಪುಟ್ಟಾಚಾರ್ ಸುರೇಶ್ ಶೆಟ್ಟಿ ಪ್ರಭಾಕರ್ ಚಂದ್ರಕಾಂತ್ ವಿನಯ್ ರಾಜೇಂದ್ರ ವೀರಣ್ಣ ಗೌಡ ಮುಂತಾದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.