ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಪ್ರತಿ ವರ್ಷದಂತೆ ಈ ವರ್ಷವೂ ಕೃಷಿಮೇಳ-2025 ರಲ್ಲಿ “ಜಿಲ್ಲಾ ಮಟ್ಟದ ಪ್ರಗತಿಪರ ರೈತ/ರೈತ ಮಹಿಳೆ” ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ/ರೈತ ಮಹಿಳೆಯರಿಂದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಶಿವಮೊಗ್ಗ ಜಿಲ್ಲೆಯ ಆಸಕ್ತರ ರೈತ/ರೈತ ಮಹಿಳೆಯರು ಅರ್ಜಿಗಳನ್ನು ಕೃಷಿ ವಿಜ್ಞಾನ ಕೇಂದ್ರ, ನವುಲೆ, ಶಿವಮೊಗ್ಗ ಅಥವಾ ಕೃಷಿ ಇಲಾಖೆ, ಓ.ಟಿ.ರಸ್ತೆ, ಶಿವಮೊಗ್ಗ ಇಲ್ಲಿ ಖುದ್ದಾಗಿ ಅಥವಾ uahs.edu.in ವೆಬ್‌ಸೈಟ್ ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿಯನ್ನು ಲಗತ್ತಿಸಿ ಸೆ. 15 ರೊಳಗೆ ಸಲ್ಲಿಸುವುದು. ಆಯ್ಕೆಯಾದ ರೈತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ನೀಡಲಾಗುವುದು.