ಬೆಂಗಳೂರು
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ಹಿರಿಯ ಕನ್ನಡಪರ ಹೋರಾಟಗಾರರಾದ ಶ್ರೀಯುತ ಹೆಚ್.ರಾಮಚಂದ್ರಯ್ಯ ಅವರನ್ನು ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದರು.

ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಹಿರಿಯರಾದ ಶ್ರೀಯುತ ಹೆಚ್.ರಾಮಚಂದ್ರಯ್ಯ ಮಾತನಾಡಿ
ಪರಿಸರವಾದಿಗಳು, ಕನ್ನಡ ಪರ ಹೋರಾಟಗಾರರು ಮತ್ತು ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರ ನೇತೃತ್ವದ ಜಯಕರ್ನಾಟಕ ಜನಪರ ವೇದಿಕೆಯು ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ಶಿಕ್ಷಣ, ರೈತರ, ಯೋಧರ, ಮಹಿಳೆಯರ, ಕಾರ್ಮಿಕರ, ದೀನದಲಿತರ ಪರವಾಗಿ ಕಳೆದ ಕೆಲವು ದಶಕಗಳಿಂದ ಚಳುವಳಿಗಳನ್ನು ರೂಪಿಸಿದ ಅನುಭವಿಗಳ, ಬುದ್ದಿಜೀವಿಗಳ, ಪರಿಸರವಾದಿಗಳ, ಸಾಹಿತಿಗಳ, ಲೇಖಕರ, ಎಲ್ಲಾ ವರ್ಗದ ಹೋರಾಟಗಾರರ, ಸ್ವಾಭಿಮಾನಿ ಕಾರ್ಯಕರ್ತರ ಜೊತೆಯಲ್ಲಿ ಪರಿಸರ ಸಂರಕ್ಷಣೆಯ ಮುಖ್ಯ ಉದ್ದೇಶದ ಜೊತೆಯಲ್ಲಿ ಸಂವಿಧಾನ ಮತ್ತು ಕಾನೂನು ಬದ್ದವಾಗಿ ಕರ್ನಾಟಕದ ಸೇವಾ ಕೈಂಕರ್ಯದಲ್ಲಿ ಸಾಗುತ್ತಿದ್ದು ರಾಜ್ಯಾಧ್ಯಕ್ಷರಾದ ಶ್ರೀಯುತ ಜೆ.ಶ್ರೀನಿವಾಸ್ ಅವರೊಂದಿಗೆ ರಾಜ್ಯದಲ್ಲಿ ಸಂಘವನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಲಗೊಳಿಸುವ ನಿಟ್ಟಿನಲ್ಲಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕರೆದೊಯ್ಯುವುದರ ಜತೆಗೆ ಸಂಘದ ಗೌರವ, ಘನತೆಗೆ ಕುತ್ತು ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಇದೇ ವೇಳೆ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಹೆಚ್.ರಾಮಚಂದ್ರಯ್ಯ ಅವರನ್ನು ಸಂಸ್ಥಾಪಕ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಸೇರಿದಂತೆ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಮಹಿಳಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಟಿ.ಪ್ರಕಾಶ್ ಗೌಡ, ರಾಜ್ಯ ಉಪಾಧ್ಯಕ್ಷರಾದ ಬಾಲಚಂದರ್, ಹಾಲಪ್ಪ ವರವಿ, ಸಲಹೆಗಾರರಾದ ಕುಮಾರಸ್ವಾಮಿ, ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಗೋಪಿ, ಕಿರಣ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ, ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಪಿ.ಲೋಕೇಶ್, ಮಹಿಳಾ ಘಟಕದ ಅಧ್ಯಕ್ಷರಾದ ಸುನಂದಾ ರೆಡ್ಡಿ, ಬೆಂಗಳೂರು ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ಕ್ಷೇತ್ರದ ಅಧ್ಯಕ್ಷರು, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.