ಸಾರಿಗೆ, ಮುಜರಾಯಿ, ಅಲ್ಪಸಂಖ್ಯಾತ, ವಸತಿ, ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ಜಿಲ್ಲೆ ಅಭಿವೃದ್ಧಿ ವೇಗ ಹೆಚ್ಚಿಸುವಂತೆ ಸೂಚನೆ .
ಬೆಂಗಳೂರು: ವಿಧಾನಸೌಧದಲ್ಲಿ ಮಂಗಳವಾರ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ನವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ ಹಾಗೂ ಮುಜರಾಯ ಪದ್ಮ ಶ್ರೀನಿವಾಸ್ ಹಾಗೂ ಸಾರಿಗೆ ಇಲಾಖೆಯ ನಿರ್ದೇಶಕಿ ನಂದಿನಿ ದೇವಿ ಹಾಗೂ ಉನ್ನತ ಉನ್ನತಾಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಸೊರಬ ಬಸ್ ಡಿಪೋ ಕಾಮಗಾರಿಯನ್ನು ಒಂದು ವಾರದೊಳಗೆ ಚಾಲನೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಮೊಗ್ಗ ಜಿಲ್ಲಾ ಗ್ರಾಮಗಳಿಗೆ ಸಾರಿಗೆ ಸೌಲಭ್ಯ ವಿಸ್ತರಿಸಲು KSRTC ಈಗಾಗಲೇ 20 ಹೊಸ ಮಾರ್ಗಗಳನ್ನು ಗುರುತಿಸಿರುವುದಾಗಿ ತಿಳಿಸಿದ್ದು, ಈ ಸಂಬಂಧ ತುರ್ತುಗತಿಯಲ್ಲಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಯಿತು. ಜಿಲ್ಲೆಗೆ 50 ಹೆಚ್ಚುವರಿ ಬಸ್‌ಗಳ ಅವಶ್ಯಕತೆ ಹಿನ್ನೆಲೆಯಲ್ಲಿ, ಮೊದಲ ಹಂತದಲ್ಲಿ 31 ಬಸ್ಸುಗಳನ್ನು ಒದಗಿಸಲಾಗಿದ್ದು, ಉಳಿದ 19 ಬಸ್ಸುಗಳನ್ನು ಶೀಘ್ರದಲ್ಲೇ ಎರಡನೇ ಹಂತದಲ್ಲಿ ಒದಗಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದರು.
ಜಡೆ ಮತ್ತು ಉಳವಿ ಬಸ್ ನಿಲ್ದಾಣಗಳ ನಿರ್ಮಾಣಕ್ಕಾಗಿ ತಲಾ 27 ಮತ್ತು 25 ಗುಂಟೆ ಜಾಗವನ್ನು ಗುರುತಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಚಂದ್ರಗುತ್ತಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಚಾಲನೆ ನೀಡಲು ಹಾಗೂ ಆಡಳಿತಾಧಿಕಾರಿ ಮತ್ತು ನಿರ್ದೇಶಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸೂಚನೆ ನೀಡಲಾಯಿತು. ಭಕ್ತರ ಸೌಲಭ್ಯಕ್ಕಾಗಿ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಾಸ್ತವ್ಯ ಕೊಠಡಿ, ಶೌಚಾಲಯ, ವಿದ್ಯುತ್ ದೀಪಗಳ ವ್ಯವಸ್ಥೆ, ರಥಬೀದಿ ಅಗಲೀಕರಣ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಸೊರಬ ತಾಲ್ಲೂಕಿನ ಮುಜರಾಯಿ ದೇವಸ್ಥಾನಗಳಿಗೆ ಹೆಚ್ಚಿನ ಅನುಧಾನ ಒದಗಿಸುವುದಂತೆ ಸೂಚಿಸಿದರು.