
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನನ್ನ ಮತ ನನ್ನ ಹಕ್ಕು’ ಎಂಬ ಘೋಷವಾಖ್ಯದಡಿ ಸೆ.15 ರಂದು ಬೆಳಗ್ಗೆ 07-30 ಗಂಟೆಗೆ ಶಿವಮೊಗ್ಗ ನಗರದ ಅಲ್ಲಮ ಪ್ರಭು ಉದ್ಯಾನ (ಫ್ರೀಡಂ ಪಾರ್ಕ್) ದಿಂದ ಪ್ರಾರಂಭಿಸಿ ಡಾ|| ಬಿ.ಆರ್. ಅಂಬೇಡ್ಕರ್ ಭವನದವರೆಗೆ ಸೈಕಲ್ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.