ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಸದೃಢವಾಗಿಸಲು ಸಹಕಾರಿಯಾಗಿದ್ದು, ಜೀವನದಲ್ಲಿ ಶಿಸ್ತನ್ನು ಕಲಿಸುತ್ತದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಹೇಳಿದರು.


ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಕ್ರೀಡೆಯೂ ಕೇವಲ ಸೋಲು ಗೆಲುವಿನ ಪಂದ್ಯವಾಗಿಲ್ಲದೇ ಅದು ಸಹೋದರತ್ವ ಹಾಗೂ ಮಾನವೀಯ ಗುಣಗಳನ್ನು ಹೊಂದಿದೆ. ಜೀವನದಲ್ಲಿ ಶಿಸ್ತನ್ನು ಸಹ ಕಲಿಸುತ್ತದೆ. ಹಾಗಾಗಿ ನಾವೆಲ್ಲರೂ ಕ್ರೀಡೆಯನ್ನು ಆಟದ ದೃಷ್ಟಿಯಿಂದ ನೋಡದೆ ಬದುಕಿನ ಒಂದು ಭಾಗವಾಗಿ ಕಾಣಬೇಕಿದೆ ಎಂದು ಅವರು ಹೇಳಿದರು.


ವಿದ್ಯಾರ್ಥಿಗಳ ಬದುಕಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯೂ ಅವಶ್ಯಕವಾಗಿದೆ. ಯಾಕೆಂದರೆ ಅವರ ಭವಿಷ್ಯದಲ್ಲಿ ಉದ್ಯೋಗವನ್ನು ಅರಸಿ ಹೋಗುವಾಗ ಕೇವಲ ಪಠ್ಯದಿಂದ ಪಡೆದ ಅಂಕವನ್ನು ಮಾತ್ರವಲ್ಲದೆ ಕ್ರೀಡೆ ಒಳಗೊಂಡAತೆ ಇನ್ನಿತರ ಪಠ್ಯೇತರ ಚಟುವಟಿಕೆಯನ್ನು ಮಾನದಂಡವಾಗಿ ಪರಿಗಣಿಸುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಕೊಂಡು ರಾಜ್ಯ, ರಾಷ್ಟç, ಅಂತರಾಷ್ಟಿçÃಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು. ಆ ಮೂಲಕ ದೇಶಕ್ಕೆ ಕೀರ್ತಿ ತರಬೇಕು. ಅದಕ್ಕೆ ಬೇಕಾದಂತಹ ಪ್ರೋತ್ಸಾಹ ಹಾಗೂ ತರಬೇತಿಯನ್ನು ಇಲಾಖೆಯಿಂದ ನೀಡಲಾಗುತ್ತದೆ ಅವರು ಎಂದರು.


ಜಿ.ಪಂ.ಮುಖ್ಯ ಯೋಜನಾಧಿಕಾರಿ ಹನುಮನಾಯ್ಕ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವವರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಈ ಕ್ರೀಡಾಕೂಟದಲ್ಲಿ ಭಾಗವಹಿಸಲು 8 ಜಿಲ್ಲೆಯಿಂದ ತಂಡಗಳು ಬಂದಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಗೆಲುಪಡೆಯಿರಿ ಎಂದು ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಮುಖ್ಯ ಅಥ್ಲೇಟಿಕ್ಸ್ ತರಬೇತಿದಾರಾ ಬಾಳಪ್ಪ ಮಾನೆ, ಇಲಾಖೆ ಸಿಬ್ಬಂದಿಗಳು ಹಾಗೂ ಕ್ರೀಡಾಪಟುಗಳು ಹಾಜರಿದ್ದರು.