
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಬೋಂಡಾ ಸೂಪ್ ತರಕಾರಿ ಚಹಾ ಮಾರುವ ಮೂಲಕ ವಿನೂತನವಾಗಿ ಆಚರಣೆ.
ಶಿವಮೊಗ್ಗ ನಗರದ ಖಾಸಗಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿದರು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ ಕುಮಾರ್
ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಹೇಳಿ ಕೇಂದ್ರದಲ್ಲಿ ಮೂರು ಬಾರಿ ಅಧಿಕಾರದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಎರಡು ಅವಧಿ ಮುಗಿಸಿ ಮೂರನೇ ಅವಧಿಯ ವರ್ಷದ ಸಂಭ್ರಮಾಚರಣೆ ಆಚರಿಸಿದರೂ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡದೇ ದೇಶದಲ್ಲಿ ನಿರುದ್ಯೋಗ ತಾಂಡವವಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು, ಇದನ್ನು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.
2014ರ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ನರೇಂದ್ರ ಮೋದಿ ಹೇಳಿದ್ದರು. ಆದರೆ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಲಿಲ್ಲ. ಬದಲಿಗೆ ಈ ಹಿಂದಿನಿಂದ ಕಾಂಗ್ರೆಸ್ ಬೆಳೆಸಿ, ಪೋಷಿಸಿದ್ದ ಸರ್ಕಾರಿ ಸ್ವಾಮ್ಯದ ಬೃಹತ್ ಕೈಗಾರಿಕೆಗಳನ್ನು ಮುಚ್ಚಿ ಲಕ್ಷಾಂತರ ಉದ್ಯೋಗಿಗಳು ಬೀದಿಗೆ ಬೀಳುವಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು .
ಇದೇ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಚ್ ಸಿ ಯೋಗೇಶ್ ರವರು ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಮೂಲಕ ಉದ್ಯೋಗ ಕಡಿತ ಮಾಡುತ್ತಾ ಬರಲಾಯಿತು.
ಉದ್ಯೋಗ ಸೃಷ್ಟಿಯ ಬಗ್ಗೆ ಸರ್ಕಾರವನ್ನು ಕೇಳಿದ ಯುವ ಜನತೆಗೆ ‘ಬೋಂಡ ಮಾರಿ, ತರಕಾರಿ ಮಾರಿ, ಚಹಾ ಮಾರಿ ಜೀವನ ನಡೆಸಿ’ ಎಂದು ಪ್ರಧಾನಿ ನರೇಂದ್ರ ಮೋದಿಯವರು ಸಲಹೆ ನೀಡಿ ತಮ್ಮ ಬೇಜವಾಬ್ದಾರಿತನ ಪ್ರದರ್ಶಿಸಿದ್ದರು. ಈಗ ಮೂರನೇ ಬಾರಿ ಪ್ರಧಾನಿಯಾಗಿ ತಮ್ಮ ಹುಟ್ಟುಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ, ಉದ್ಯೋಗ ಸೃಷ್ಟಿಯ ಬಗ್ಗೆ ಮಾತನಾಡುತ್ತಿಲ್ಲ.
ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದಾಗಿ ಯುವಜನತೆ ಕಂಗಾಲಾಗಿದ್ದಾರೆ. ಉನ್ನತ ವ್ಯಾಸಂಗ ಮಾಡಿದವರು ದಿನಗೂಲಿ ಕೆಲಸವೂ ಸಿಗದೆ ಪರದಾಡುತ್ತಿದ್ದಾರೆ ಎಂದು ದೂರಿದರು.
ಯುವ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಮಾತನಾಡಿ
ಮೇಕ್ ಇನ್ ಇಂಡಿಯಾ ಮಂತ್ರ ಜಪಿಸುತ್ತಲೇ ಪ್ರಧಾನಿ ಮೋದಿಯವರು ದೇಶದ ವಿದ್ಯಾವಂತ ಯುವ ಜನತೆಯನ್ನು ನಿರುದ್ಯೋಗಿಗಳನ್ನಾಗಿ ಮಾಡಿ ಅವರ ಬದುಕನ್ನು ದುಸ್ತರ ಮಾಡಿದ್ದಾರೆ.
ಆದ್ದರಿಂದ ಈ ದಿನ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನವನ್ನು ನಿರುದ್ಯೋಗಿ ಯುವಜನತೆ ಬಸ್ ಸ್ಟ್ಯಾಂಡ್‍ನಲ್ಲಿ ಬೋಂಡ, ತರಕಾರಿ, ಚಹಾ ಮಾರುವ ಮೂಲಕ ಆಚರಿಸುತ್ತಿದ್ದು, ದೇಶದ ನಿರುದ್ಯೋಗಿ ಯುವಕರ ಬದುಕನ್ನು ಸರ್ಕಾರಕ್ಕೆ ತೋರಿಸಿ ಕೊಡುತ್ತಿದ್ದೇವೆ.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಮಧುಸೂದನ್, ಚೇತನ್ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್, ಬ್ಲಾಕ್ ಅಧ್ಯಕ್ಷರಾದ ಗಿರೀಶ್, ಪ್ರವೀಣ, ಶಶಿಕುಮಾರ್, ಸಕ್ಲೇನ್, ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಸತ್ತಾರ್, ಮಲಗುಪ್ಪ ಶಿವು, ಆಕಾಶ್, ತೌಪಿಕ್, ರೇಷ್ಮಾ, NSUI ರಾಜ್ಯ ಕಾರ್ಯದರ್ಶಿ ಬಾಲಾಜಿ ಜಿಲ್ಲಾಧ್ಯಕ್ಷ ವಿಜಯ್ , ಜಿಲ್ಲಾ ಕಾರ್ಯಧ್ಯಕ್ಷ ರವಿಕಟಿಕೆರೆ, ನಗರ ಅಧ್ಯಕ್ಷರ ರವಿ, ಸುಭಾನ್, ಚಂದ್ರ ಜಿ ರಾವ್, ವರುಣ್ ವಿ ಪಂಡಿತ್, ಆದಿತ್ಯ, ನಂದೀಶ್, ಶ್ರೀಕಾಂತ ಉಪಸ್ಥರಿದ್ದರು.