ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ ಬೆಂಗಳೂರು ಇವರ ವತಿಯಿಂದ ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಕೃಷ್ಣ ಪ್ರಸಾದ್ ಶೆಟ್ಟಿ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಬಂಟರ ನಾಡವರ ಸಂಘದ ಪರವಾಗಿ ಶ್ರೀ ಕೆಪಿ ಶೆಟ್ಟಿ ಹಾರ್ದಿಕ ಶುಭಾಶಯಗಳು ಮತ್ತು ಅಭಿನಂದನೆಗಳು.
ನಿಮ್ಮ ಅಧಿಕಾರದ ಅವಧಿಯಲ್ಲಿ ಕನ್ನಡ ಜಾಗೃತಿ ಸಮಿತಿ ವತಿಯಿಂದ ಕನ್ನಡಪರ ಕಾರ್ಯಕ್ರಮಗಳು ಮತ್ತು ಹೋರಾಟಗಳು ಮತ್ತಷ್ಟು ಬಲಗೊಳ್ಳಲಿ ಮತ್ತು ಜನಪರವಾಗಲಿ ಎಂದು ಶುಭ ಹಾರೈಸಿದರು.