
ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ತಹಶೀಲ್ದಾರ್ ಕಚೇರಿಯ ಮೇಲೆ ಏಕಕಲಾದಲ್ಲಿ ಲೋಕಯುಕ್ತರು ದಾಳಿ ನಡೆಸಿದ್ದಾರೆ. ಸಾರ್ವಜನಿಕರ ಅಹವಾಲಿನ ಮೇಲೆ ಬಂದಂತಹ ಜಿಲ್ಲೆಯ 7 ತಾಲೂಕಿನ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ಪರಿಶೀಲನೆ ನಡೆಸಿದ್ದಾರೆ.

ಕಚೇರಿಯಲ್ಲಿ ಜಮೀನುಗಳಿಗೆ ದಾರಿಗೆ ಬೇಡಿಕೆ, ಸಿಂಧುತ್ವ ಪ್ರಮಾಣ ಪತ್ರ, ಮೈನಾರಿಟಿ, ಸಾಲ್ವೆನ್ಸಿ ಸರ್ಟಿಫಿಕೇಟ್, ಜಾತಿ ಪ್ರಮಾಣಪತ್ರ ಪಡೆಯಲು ಸಲ್ಲಿಕೆಯಾದ ಅರ್ಜಿಗಳು ಅದರಲ್ಲಿ ನಿಗದಿತ ಕಾಲಮಿತಿಯಲ್ಲಿ ಎಷ್ಟು ವಿಲೇವಾರಿ ಆಗಿವೆ. ಎಷ್ಟು ಬಾಕಿ ಉಳಿದಿವೆ ಎಂದು ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಂದ ಅಹವಾಲು, ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ವಿವರ, ಬಾಕಿ ಇರುವ ಕಡತಗಳು, ಸುದೀರ್ಘ ಕಾಲದಿಂದ ಬಾಕಿ ಉಳಿಸಿಕೊಂಡಿರುವುದಕ್ಕೆ ಕಾರಣ, ಹಕ್ಕು ಬದಲಾವಣೆ, ಭೂ ಮಂಜೂರಾತಿ, ಭೂಮಿ, ಬಗರ್‌ಹುಕುಂ, ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಉಳಿದಿರುವ ಅರ್ಜಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.
ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆ, ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆಸುವ ಆರೋಪಗಳ ಹಿನ್ನೆಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ ಮೇರೆಗೆ ಲೋಕಾಯುಕ್ತ ಪೊಲೀಸರು, ಶಿವಮೊಗ್ಗದ ತಹಶೀಲ್ದಾರ್ ಕಚೇರಿ ಸೇಳಿದಂತೆ ತಾಲೂಕಿನ 6 ತಹಶೀಲ್ದಾರ್ ಕಚೇರಿಯ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಅಧಿಕಾರಿಗಳನ್ನೊಳಗೊಂಡ ದಾವಣಗೆರೆ ಚಿತ್ರದುರ್ಗ ನಾಲ್ಕು ತಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ಪೈಕಿ ಒಂದು ತಂಡ ಶಿವಮೊಗ್ಗದ ತಹಶೀಲ್ದಾರ್ ಕಚೇರಿಯ ಕಾರ್ಯಾಚರಣೆಯ ಉಸ್ತುವಾರಿ ವಹಿಸಿತ್ತು.