
ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾ ಅಂಗವಾಗಿ ರೈತ ದಸರಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮೆರವಣಿಗೆಯಲ್ಲಿ ಅಲಂಕೃತ ಎತ್ತಿನಗಾಡಿ, ಟ್ರಾಕ್ಟರ್, ಟಿಲ್ಲರ್ ಜಾಥಾ ಕಾರ್ಯಕ್ರಮ ನಡೆಯಿತು. ರೈತ ದಸರಾ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದ ವರೆಗೆ ಮೆರವಣಿಗೆ ನಡೆಸಲಾಯಿತು.

ನಗರದ ಬಿಹೆಚ್ ರಸ್ತೆಯ ಮೂಲಕ ರೈತರ ಜಾಥಾ ಸಾಗಿತು. ಪ್ರಗತಿಪರ ರೈತರು ಹಾಗೂ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ವಿಜೇತರಾದ ಕಮಲಮ್ಮ ಮತ್ತು ಶಾಸಕ ಚನ್ನಬಸಪ್ಪ ಜಾಥಾಗೆ ಚಾಲನೆಯನ್ನು ನೀಡಿದರು. ಶಾಸಕ ಚನ್ನಬಸಪ್ಪ ಎತ್ತಿನಗಾಡಿ ಓಡಿಸುವ ಮೂಲಕ ವಿಶೇಷವಾಗಿ ಗಮನ ಸೆಳೆದರು.
ಈ ಸಂದರ್ಭದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸೇರಿದಂತೆ ಹಲವು ರೈತ ಮುಖಂಡರು ಸಹ ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.