
“ದೂರ ಸರಿದ ಸಾಹಿತ್ಯ ಕ್ಷೇತ್ರದ ಧ್ರುವತಾರೆಗೆ ಅಂತಿಮ ನಮನ” ಸಲ್ಲಿಸಿದ ಸಚಿವ ಮಧು ಬಂಗಾರಪ್ಪ.
ಕನ್ನಡ ಸಾಹಿತ್ಯ ಲೋಕಕ್ಕೆ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಗಳನ್ನು ನೀಡಿದ ಅದ್ಭುತ ಬರಹಗಾರ, ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ಎಸ್.ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದು, ಸಚಿವ ಮಧು ಬಂಗಾರಪ್ಪ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ವರ್ಗಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಲಾಯಿತು.