ರಾಜ್ಯ ಸರ್ಕಾರ 22ರಿಂದ ಜಾತಿ ಗಣತಿ ಸಮೀಕ್ಷೆಯನ್ನು ಪ್ರಾರಂಭಿಸಿದೆ.ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಜಾತಿ ಗಣತಿ ಸಮೀಕ್ಷೆ ನಡೆಯುತ್ತಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಹೊಸನಗರ ತಾಲೂಕಿನ ಬಿ ಆರ್ ಸಿ ಕೇಂದ್ರದ ಕ್ಷೇತ್ರ ಸುಮನ್ವಯ ಅಧಿಕಾರಿಯಾಗಿ ರಂಗನಾಥ್.ಎಂ ಅವರು ಕಾರ್ಯ ನಿರ್ವಹಿಸುತ್ತಿದ್ದರು.ಯಾವುದೇ ಪೂರ್ವಾನುಮತಿ ಪಡೆಯದೆ ರಜೆ ಹಾಕಿದ್ದು, ದೂರವಾಣಿ ಕರೆಗು ಸ್ಪಂದಿಸಲಿಲ್ಲ. ಇದರಿಂದ ಸಮೀಕ್ಷೆ ಕಾರ್ಯಕ್ಕೆ ತೊಡಕಾಗಿದೆ. ಈ ಹಿನ್ನೆಲೆ ತಕ್ಷಣದಿಂದಲೇ ರಂಗನಾಥ್.ಎಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.