
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಸಮೀಕ್ಷೆಗೆ ಸಂಪೂರ್ಣ ಸಹಕಾರ ನೀಡುವಂತೆ, ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪನವರುಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಸಾರ್ವಜನಿಕ ಶಿಕ್ಷಣ ಆಯುಕ್ತರಾದ ಡಾ. ಕೆ. ವಿ. ತ್ರಿಲೋಕ ಚಂದ್ರ, ಮತ್ತು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ವಿಶೇಷ ಕರ್ತವ್ಯ ಅಧಿಕಾರಿ ಸೆಲ್ವಮಣಿ ಜಿ.ಬಿ. ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಶಿಕ್ಷಕರನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸೂಚಿಸಲಾಯಿತು.