
ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ
ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ವೃತ್ತ ಗಳಲ್ಲಿ ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಮನೆ ಮನೆಗೆ ಪೊಲೀಸ್ ಕುರಿತು ಇಲಾಖಾ ಮೇಲಧಿಕಾರಿಗಳು ನೀಡಿದ ಸಲಹೆ ಸೂಚನೆಗಳನ್ನು ವಿವರಿಸಿ ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಪೊಲೀಸ್ ವೃತ್ತ ನಿರೀಕ್ಷರು, ಪೊಲೀಸ್ ಉಪಾಧೀಕ್ಷಕರುಗಳು ಉಪಸ್ಥಿತರಿದ್ದರು.