
ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಚೇತನ್ ಗೌಡ ಅಧಿಕಾರ ಸ್ವೀಕಾರ…
ಕರ್ನಾಟಕ ರಾಜ್ಯ ಸರ್ಕಾರದ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSTIDC) ಅಧ್ಯಕ್ಷರಾಗಿ ಚೇತನ್ ಗೌಡ ಅವರು ಇಂದು ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಚೇತನ್ ಗೌಡ ರವರು ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸದಸ್ಯನಾಗಿ ಪಕ್ಷಕ್ಕೆ ದುಡಿದಿದ್ದಾರೆ. ನಂತರ NSUI ಜಿಲ್ಲಾಧ್ಯಕ್ಷರಾಗಿ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ 2 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎರಡು ಬಾರಿ ಸ್ಪರ್ಧಿಸಿದ್ದಾರೆ. ಪಕ್ಷ ಇದನ್ನೆಲ್ಲ ಮನಗೊಂಡು ಚೇತನ್ ರವರಿಗೆ ಈ ಮಹತ್ವದ ಸ್ಥಾನವನ್ನು ನೀಡಿ ನಿಷ್ಠಾವಂತ ಕಾರ್ಯಕರ್ತನಿಗೆ ಗೌರವಿಸಿದೆ.