ಕರ್ನಾಟಕ ರಕ್ಷಣಾ ವೇದಿಕೆ ಟಿ ಎ ನಾರಾಯಣ ಗೌಡರ ಬಣ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.ಶಿವಮೊಗ್ಗ ಜಿಲ್ಲಾ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೋಮಶೇಖರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ಉದ್ದೇಶದಿಂದ ಮಾತನಾಡಿದ ಅವರು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ.ಕರ್ನಾಟಕ ಸರ್ಕಾರ ಕರ್ನಾಟಕದಲ್ಲಿ ಹಿಂದಿ ಭಾಷೆಯನ್ನು ರದ್ದುಗೊಳಿಸಬೇಕೆಂದು ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಮೇಲೆ ಹಾಕಿರುವ ಕೇಸ್ಗಳನ್ನು ವಾಪಸ್ ಪಡಿಬೇಕಂದು ಕಾರ್ಯಕರ್ತರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಮುಖಂಡರು ಪದಾಧಿಕಾರಿಗಳು ಹಾಗೂ ತಾಲೂಕು ಅಧ್ಯಕ್ಷರುಗಳು ಹಾಗೂ ತಾಲೂಕು ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.