ಸ್ಥಳ ಶಿವಮೊಗ್ಗ ಬಂಟರ ಭವನ…
5-10-2025 ರಿಂದ 15 ದಿನಗಳು…
ಬೆಳಗ್ಗೆ 6 ರಿಂದ 7 ಗಂಟೆಯವರೆಗೆ
ಶಿವಗಂಗಾ ಯೋಗ ಕೇಂದ್ರ ಮತ್ತು ಶಿವಮೊಗ್ಗ ಬಂಟರ ಸಂಘ ಸಹಯೋಗದಲ್ಲಿ ಉಚಿತ ಯೋಗ ಶಿಬಿರವನ್ನು ಅಧ್ಯಕ್ಷರಾದ ಡಾ ಸತೀಶ್ ಕುಮಾರ್ ಶೆಟ್ಟಿ ಡಾ ಯೋಗ ರಾಧ್ಯ ರವರು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಸುರೇಶ್ ಶೆಟ್ಟಿ ನಿರ್ದೇಶಕರಾದ ದಿವಾಕರ್ ಶೆಟ್ಟಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಶಿವಗಂಗಾ ಯೋಗ ಕೇಂದ್ರದ ಪದಾಧಿಕಾರಿಗಳು ಮತ್ತು ಗೋಪಾಲಗೌಡ ಬಡಾವಣೆಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟರು.
ವಿಶೇಷ ಸೂಚನೆ…
5-10-2025 ರಿಂದ 15 ದಿನಗಳ ಕಾಲ ಶಿವಮೊಗ್ಗ ಬಂಟರ ಭವನದಲ್ಲಿ ಪ್ರತಿದಿನ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ ಉಚಿತ ಯೋಗ ಪ್ರಾಣಾಯಾಮ ಮತ್ತು ಧ್ಯಾನ ಇರುತ್ತದೆ.
ಗೋಪಾಲಗೌಡ ಬಡಾವಣೆಯ ಸುತ್ತಮುತ್ತಲಿನ ಎಲ್ಲಾ ನಿವಾಸಿಗಳು ಯೋಗ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಶಿವಗಂಗಾ ಯೋಗ ಕೇಂದ್ರದ ಮುಖ್ಯಸ್ಥರು ವಿನಂತಿಸಿದ್ದಾರೆ.