ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ ತನಿಖೆಯಲ್ಲಿರುವ ಪ್ರಕರಣಗಳನ್ನು ಕಾಲ ಮಿತಿಯೊಳಗೆ ತನಿಖೆ ಪೂರೈಸಿ, ಅಂತಿಮ ವರದಿಯನ್ನು ಸಲ್ಲಿಸುವಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಮುಂಗಡವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲು, ಸಂಘಟಿತ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದಾಳಿ ನಡೆಸಿ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲು ಹಾಗೂ ರೌಡಿ ಆಸಾಮಿಗಳ ವಿರುದ್ಧ ಕ್ರಮ ಕೈಗೊಂಡು, ರೌಡಿ ಚಟುವಟಕೆಯನ್ನು ಮಟ್ಟ ಹಾಕಲು ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಿರುತ್ತಾರೆ.

ಈ ಸಭೆಯಲ್ಲಿ ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶ್ರೀ ರಮೇಶ್‌ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2,‌ ಶ್ರೀ ಬೆನಕ ಪ್ರಸಾದ್‌ ಐಪಿಎಸ್, ಎ.ಎಸ್.ಪಿ, ಸಾಗರ ಉಪ ವಿಭಾಗ, ಶ್ರೀ ದಿಲೀಪ್, ಪೊಲೀಸ್ ಉಪಾದೀಕ್ಷಕರು, ಡಿಎಆರ್ ಶಿವಮೊಗ್ಗ, ಶ್ರೀ ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ, ಶ್ರೀ ನಾಗರಾಜ್, ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ, ಶ್ರೀ ಸಂಜೀವ್‌ ಕುಮಾರ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಬಿ ಉಪ ವಿಭಾಗ, ಶ್ರೀ ಅರವಿಂದ ಕಲಗುಚ್ಚಿ ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ, ಶ್ರೀ ಕೃಷ್ಣಮೂರ್ತಿ ಪೊಲೀಸ್ ಉಪಾದೀಕ್ಷಕರು, ಸಿ.ಇ.ಎನ್ ಪೊಲೀಸ್ ಠಾಣೆ ಶಿವಮೊಗ್ಗ ಮತ್ತು ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *