ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮಗಳ ಖಾಲಿ ಇರುವ ತಜ್ಞ ವೈದ್ಯರು, ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಹುದ್ದೆಗೆ ಏರ್ಪಡಿಸಲಾಗಿದ್ದ ನೇರಸಂದರ್ಶನದಲ್ಲಿ ಹಾಜರಾದವರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಅ.21 ರೊಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.