ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಅ.27 ರಿಂದ 13 ದಿನಗಳ ಕಾಲ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ತರಬೇತಿ ಸಮಯದಲ್ಲಿ ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗಿದ್ದು, ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಅ. 27 ರಂದು ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970476050/, 9591514154 / 9686248369 ಗಳನ್ನು ಸಂಪರ್ಕಿಸುವುದು.
==

Leave a Reply

Your email address will not be published. Required fields are marked *