ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಪ್ರತಿ ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರು ಮಾಡಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ|| ಕೆ.ಪಿ.ಅಂಶುಮಂತ್ ಕರೆ ನೀಡಿದರು.
ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆಯು ಶಿವಮೊಗ್ಗ ಜಿಲ್ಲೆಯ ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಮಹಿಳೆಯರು, ಯುವಕರ ಬದುಕಿಗೆ ಗ್ಯಾರಂಟಿ ಯೋಜನೆಗಳು ಆಸರೆಯಾಗಿವೆ. ಇದಕ್ಕೆ ಪೂರಕವಾಗಿ ರಾಜ್ಯಸರ್ಕಾರ ಕೋಟ್ಯಾಂತರ ರೂ.ಗಳನ್ನು ಜನರಿಗಾಗಿ ವ್ಯಯಿಸುವ ಮೂಲಕ ಬಡವರ್ಗದ ಜನರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ತಿಳಿಸಿದರು.
ಪ್ರಸ್ತುತ ಎರಡು ಜಿಲ್ಲೆಗಳ ಸಹಭಾಗಿತ್ವದಲ್ಲಿ ಆಯೋಜಿಸಿರುವ ಸಭೆಯಲ್ಲಿ ಗ್ಯಾರಂಟಿ ಪ್ರಾಧಿಕಾರದ ಸದ ಸ್ಯರುಗಳ ಸಹಕಾರ, ಸಲಹೆ ಹಾಗೂ ವಿಚಾರಗಳನ್ನು ತಿಳಿಸಿದರೆ ಸರ್ಕಾರದ ಮಟ್ಟದಲ್ಲಿ ಧ್ವನಿಯಾಗಿ ತಾವು ಸೇರಿದಂತೆ ಗ್ಯಾರಂಟಿ ಅಧ್ಯಕ್ಷರು ಕೆಲಸ ಮಾಡಲಿದ್ದು ಮುಕ್ತವಾಗಿ ಚರ್ಚಿಸಲು ಮುಂದಾಗಬೇಕು ಎಂದು ತಿಳಿಸಿದರು.
ಭದ್ರಾ ಕಾಡಾ ಪ್ರಾಧಿಕಾರದಿಂದ ರೈತರಿಗೆ ಅನೇಕ ಮಾರ್ಗಸೂಚಿಗಳನ್ನು ನೀಡಲಾಗಿದ್ದು ಹೆಚ್ಚು ನೀರು ಬಳಕೆಯಿಂದ ಭೂಮಿ ಹದಗೆಡುವ ಸಾಧ್ಯತೆಯಿದ್ದು ಹೀಗಾಗಿ ನಿಯಮಿತ ನೀರಿನ ಬಳಸಿಕೊಂಡು ಭೂಮಿ ಫಲವವತ್ತೆಯಿಂದ ಕೂಡಿರಲು ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕೃಷಿ ಬೆಳೆಗಳ ಅ ಧಿಕ ಇಳುವರಿಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ರಾಜ್ಯದ ರೈತರು, ಕಾರ್ಮಿಕರಿಗೆ ಸರ್ಕಾರ ನಿರಂತರವಾಗಿ ಸ್ಪಂದಿಸುವ ಕೆಲಸ ಮಾಡುತ್ತಿದೆ. ಜೊತೆಗೆ ಸಹಕಾರ ಸಂಘದ ಸುಭದ್ರತೆ ಒತ್ತು ಜೊತೆಗೆ ಸ್ವಸಹಾಯ ಮಹಿಳಾ ಗುಂಪುಗಳಿಗೆ ಪೂರಕ ಸೌಲಭ್ಯವನ್ನು ಒದಗಿಸಿ, ಸ್ವಾವಲಂಬಿ ಬದುಕಿಗೆ ಆಸರೆಯಾಗಿ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅಕ್ಕಿ ವಿತರಿಸಿದ್ದು ಮುಂ ದಿನ ದಿನಗಳಲ್ಲಿ ಹೊಸದಾಗಿ ಆಹಾರ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಿದೆ. ಸರ್ಕಾರಿ ನೌಕರರ ಏಳನೇ ವೇತನ ಆಯೋಗ ಜಾರಿಗೊಳಿಸಿ ವಿಶ್ವಾಸ ಹಾಗೂ ನಂಬಿಕೆಗೆ ಅರ್ಹವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ದೇಶದ ಬೆನ್ನಲುಬು ರೈತರಿಗೆ ನೀರಿನ ಸಮರ್ಪಕ ಬಳಕೆ ದೃಷ್ಟಿಯಿಂದ ಜಾಗೃತಿ ಮೂಡಿಸುವ ಕಾರ್ಯ ವು ಪ್ರಾಧಿಕಾರವು ನಿರಂತರವಾಗಿ ಮಾಡುತ್ತಿದೆ. ಈ ಬಗ್ಗೆಯು ಗ್ಯಾರಂಟಿ ಸದಸ್ಯರು ಸಲಹೆ, ಸಹಕಾರ ನೀಡಿ ದರೆ ಗೌರವಿಸುವ ಗುಣವನ್ನು ಆಡಳಿತ ಮಂಡಳಿ ಮಾಡಲಿದೆ ಎಂದರು.
ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನ೦ದಸ್ವಾಮಿ ಮಾತನಾಡಿ ಪಂಚ ನದಿಗಳ ಉಗಮ ಸ್ಥಾನವಾದ ಜಿಲ್ಲೆಗೆ ವಿಶೇಷ ಗೌರವಿದೆ. ಅಲ್ಲದೇ ಜಿಲ್ಲೆಯಿಂದ ಹರಿಯುವ ನೀರು ಶಿವಮೊ ಗ್ಗದತ್ತ ಸಾಗಿ ಲಕ್ಷಾಂತರ ಮಂದಿಗೆ ಕುಡಿಯುವ ನೀರಾಗುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಹಾಗೂ ಸಮರ್ಪಕ ನೀರು ಬಳಸುವ ಸಂಬಂಧ ಜಿಲ್ಲಾ, ತಾಲ್ಲೂಕು ಅಧಿಕಾರಿಗ ಳೊಂದಿಗೆ ಸಭೆ ನಡೆಸಿ ಚರ್ಚಿಸಿ ಕೆಲಸ ಮಾಡುವ ಆಲೋಚನೆಯಿದ್ದು ಶಿವಮೊಗ್ಗದಲ್ಲೂ ಈ ರೀತಿಯ ಕರ‍್ಯ ಚಟುವಟಿಕೆಗಳು ಕೈಗೊಂಡರೆ ಉಪಯೋಗಿಯಾಗಲಿದೆ. ಗ್ಯಾರಂಟಿ ಯೋಜನೆ ಜನರಿಂದ ತೆರಿಗೆ ಪಡೆದು, ಜನರಿಗಾಗಿ ವ್ಯಯಿಸುವ ಕೆಲಸ ರಾಜ್ಯಸರ್ಕಾರ ಮಾಡುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಪಂಚ ಗ್ಯಾರಂಟಿ ಯೋಜನೆ ಜಿಲ್ಲೆಯಲ್ಲಿ ಅನುಷ್ಟಾನಗೊಂಡು ಶೇ.೯೮.೫ರಷ್ಟು ಪ್ರಗತಿ ಸಾಧಿಸಿ, ಕೋಟ್ಯಾಂತರ ಹಣವನ್ನು ರಾಜ್ಯಸರ್ಕಾರ ಜಿಲ್ಲೆಗೆ ಭರಿಸಿದೆ. ಅಲ್ಲದೇ ಉದ್ಯೋಗ ಮೇಳ ನಡೆಸಿ ಶೇ.೯೦ ರಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಭದ್ರಾ ಕಾಡಾ ಪ್ರಾಧಿಕಾರದ ಆಡಳಿತಾಧಿಕಾರಿ ಆರ್.ಸತೀಶ್, ಭೂ ಅಭಿವೃದ್ದಿ ಅ ಧಿಕಾರಿ ತಾಂತ್ರಿಕ, ಪ್ರಭಾರ ಕೃಷಿ ಅಧಿಕಾರಿ ಕೆ.ಪ್ರಶಾಂತ್, ಭೂ ಅಭಿವೃದ್ದಿ ಅಧಿಕಾರಿ ಸಹಕಾರ ಶಾಖೆ ಡಾ|| ನಾಗೇಶ್ ಡೊಂಗ್ರೆ, ಚಿಕ್ಕಮಗಳೂರು-ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರು, ಸದಸ್ಯರು, ಕಚೇರಿ ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.